HomeKarnatakaಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ ಯೋಜನೆಗೆ ಮರುಜೀವ

ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ ಯೋಜನೆಗೆ ಮರುಜೀವ

ರೈಲ್ವೆ ಸಚಿವಾಲಯ ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ ಆರ್ಥಿಕವಾಗಿ ಕಾರ್ಯಸಾಧುವಲ್ಲ ಎಂದು ಯೋಜನೆಗೆ ಕೆಂಪು ಬಾವುಟ ತೋರಿಸಿದೆ. ಅಲ್ಲದೇ ಇದು ಕೊಡಗು ಜಿಲ್ಲೆಗೆ ರೈಲು ಸಂಪರ್ಕ ಕಲ್ಪಿಸುವ ಯೋಜನೆಯಾಗಿದೆ. ಈ ಯೋಜನೆಗೆ ಮರು ಜೀವ ನೀಡಲು ಈಗ ಸಂಸದರು ಪ್ರಯತ್ನ ಮಾಡಿದ್ದಾರೆ.

ಮೈಸೂರು-ಕೊಡಗು ಸಂಸದ ಯದುವೀರ್ ಒಡೆಯರ್ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಅಶ್ವಿನ್ ವೈಷ್ಣವ್‌ ಅವರನ್ನು ಭೇಟಿ ಮಾಡಿದ್ದರು. ಆಗ ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ ಪುನಾರಂಭಿಸಲು ಮನವಿ ಸಲ್ಲಿಸಿದ್ದಾರೆ.

ಸಂಸದರು ಅನಿವಾರ್ಯ ಕಾರಣದಿಂದ ನನೆಗುದಿಗೆ ಬಿದ್ದಿರುವ ಮೈಸೂರು-ಕುಶಾಲ ನಗರ ಯೋಜನೆಗೆ ಮರು ಚಾಲನೆ ನೀಡಬೇಕು. ಪ್ರಮುಖವಾಗಿ ಭೂ ಸ್ವಾಧೀನ ಪ್ರಕ್ರಿಯೆ ಆರಂಭಿಸಲು ಮಧ್ಯ ಪ್ರವೇಶಿಸಬೇಕು ಎಂದು ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಯೋಜನೆಗೆ ಕೆಲವು ಪ್ರಕ್ರಿಯೆ ಪೂರ್ಣಗೊಂಡಿದ್ದರೂ, ಯೋಜನೆ ನಿಧಾನಗತಿಯಲ್ಲಿ ಸಾಗಿದೆ ಅಥವಾ ನನೆಗುದಿಗೆ ಬಿದ್ದಿದೆ. ಆದ್ದರಿಂದ ಈ ಕುರಿತು ಗಮನಹರಿಸಬೇಕು ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಯೋಜನೆಗೆ ಚಾಲನೆ ನೀಡಬೇಕು: ಮೈಸೂರು (ಬೆಳಗೊಳ) – ಕುಶಾಲನಗರ ನಡುವಿನ 89 ಕಿ.ಮೀ. ಯೋಜನೆಯ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದರೂ ಕಾರಣಾಂತರಗಳಿಂದ ಯೋಜನೆ  ಸ್ಥಗಿತಗೊಂಡಿದೆ. ಈ ಯೋಜನೆಗೆ ಪುನರುಜ್ಜೀವನಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಚಿವರು ಮಧ್ಯಪ್ರವೇಶಿಸಬೇಕು ಎಂದು ಮನವಿ ಮಾಡಲಾಗಿದೆ ಎಂದು ಸಂಸದ ಯದುವೀರ್‌ ಒಡೆಯರ್ ಹೇಳಿದ್ದಾರೆ.

ಕೊಡಗು ಜಿಲ್ಲೆಗೆ ಸೂಕ್ತ ರೈಲು ಸಂಪರ್ಕವಿಲ್ಲದೇ ಪ್ರಮುಖ ಪ್ರವಾಸೋದ್ಯಮ ಮತ್ತು ತೋಟಗಾರಿಕೆ ಕ್ಷೇತ್ರಗಳ ಆರ್ಥಿಕತೆಗೆ ಭಾರೀ ತೊಂದರೆಯಾಗುತ್ತಿದೆ. ಸಂಪೂರ್ಣವಾಗಿ ರಸ್ತೆ ಸಂಪರ್ಕದ ಮೇಲೆ ಬೆಳೆಗಾರರು ಅವಲಂಬಿತಾಗಿದ್ದಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಈ ರೈಲು ಯೋಜನೆಯು ಕೊಡಗು ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತಮ ಅವಕಾಶವನ್ನು ಒದಗಿಸುತ್ತದೆ. ಕೃಷಿ-ತೋಟಗಾರಿಕೆ ಪೂರೈಕೆ ಸರಪಳಿಗಳನ್ನು ಬಲಪಡಿಸುತ್ತದೆ ಮತ್ತು ಕೊಡಗನ್ನು ಮೈಸೂರು ಮತ್ತು ಬೆಂಗಳೂರಿನ ಬೆಳವಣಿಗೆಯ ಕಾರಿಡಾರ್‌ಗಳೊಂದಿಗೆ ಸಂಯೋಜಿಸುತ್ತದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.

ರೈಲ್ವೆ ಸಚಿವಾಲಯವು ಈ ಯೋಜನೆ ಜಾರಿ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ರೈಲ್ವೆ ಸಚಿವಾಲಯ ಹಾಗೂ ಅಧಿಕಾರಿಗಳ ಜೊತೆ ನಿರಂತರವಾಗಿ ಸಂಪರ್ಕದಲ್ಲಿದ್ದು ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಎಲ್ಲ ರೀತಿಯಲ್ಲೂ ಕ್ರಮ ಕೈಗೊಳ್ಳಲಾಗುವುದು. ನನ್ನ ಕ್ಷೇತ್ರದ ಅಭಿವೃದ್ಧಿಗೆ ನಾನು ಬದ್ಧನಾಗಿದ್ದೇನೆ ಎಂದು ಸಂಸದರು ತಿಳಿಸಿದ್ದಾರೆ.

ಮನವಿಯನ್ನು ಸ್ವೀಕರಿಸಿರುವ ರೈಲ್ವೆ ಸಚಿವ ಅಶ್ವಿನ್‌ ವೈಷ್ಣವ್‌ ಕೂಡಲೇ ಪರಿಶೀಲನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಸಂಸದ ಯದುವೀರ್‌ ಒಡೆಯರ್‌ ಮಾಹಿತಿ ನೀಡಿದ್ದಾರೆ.

ಹೈಸ್ಪೀಡ್‌ ರೈಲಿಗೆ ಮೈಸೂರು ಸೇರಿಸಿ: ಮತ್ತೊಂದು ಮನವಿಯಲ್ಲಿ ಯದುವೀರ್ ಒಡೆಯರ್ ಕೇಂದ್ರ ಬಜೆಟ್‌ನಲ್ಲಿ ಬೆಂಗಳೂರು-ಚೆನ್ನೈ ಹೈಸ್ಪೀಡ್‌ ರೈಲು ಯೋಜನೆ ಘೋಷಿಸಲಾಗಿದೆ. ಆದರೆ ಮೈಸೂರು ಕೈ ಬಿಡಲಾಗಿದೆ. ರೈಲ್ವೆ ಸಚಿವರು ಕೂಡಲೇ ಮಧ್ಯ ಪ್ರವೇಶಿಸಿ ಈ ಯೋಜನೆಗೆ ಸಾಂಸ್ಕೃತಿಕ ನಗರಿಯನ್ನೂ ಸೇರಿಸಬೇಕು ಎಂದು ಮನವಿ ಸಲ್ಲಿಸಿದ್ದಾರೆ.

ಮೈಸೂರು ಈಗ ಪ್ರಮುಖ ಪ್ರವಾಸಿ ತಾಣವಾಗಿದೆ. ಐಟಿ ಹಬ್‌ ಆಗುತ್ತಿದೆ. ರಾಜಧಾನಿ ಬೆಂಗಳೂರಿನೊಂದಿಗೆ ಸೂಕ್ತ ಸಂಪರ್ಕ ಜಾಲ ಹೊಂದಿದರೆ ಆರ್ಥಿಕ ಪ್ರಗತಿಯಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular