ಬೆಂಗಳೂರು: ಕುರಿಗಾಹಿಗಳಿಗೆ ಪರವಾನಗಿ ಸಹಿತ ಬಂದೂಕು ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ.
ಕರ್ನಾಟಕ ಸಾಂಪ್ರದಾಯಿಕ ಅಲೆಮಾರಿ ಕುರಿಗಾಹಿಗಳ ಹಿತರಕ್ಷಣಾ ಸಮಿತಿ ವತಿಯಿಂದ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಲೆಮಾರಿ ಕುರಿಗಾರರ ಮೇಲಿನ ದೌರ್ಜನ್ಯ ತಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಮನವಿ ಸಲ್ಲಿಸಲಾಗಿದೆ.
ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಮಿತಿಯ ಅಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ನಿಯೋಗ 14 ಬೇಡಿಕೆಗಳನ್ನು ಒಳಗೊಂಡ ಮನವಿ ಸಲ್ಲಿಸಿದೆ. ನಂತರ ಮಾತನಾಡಿದ ಮಂಜುನಾಥ್, ಅಲೆಮಾರಿ ಕುರಿಗಾಹಿಗಳ ಮೇಲೆ ದೌರ್ಜನ್ಯ ತಡೆಯಬೇಕು. ಕುರಿಗಾಹಿಗಳಿಗೆ ಪರವಾನಗಿ ಸಹಿತ ಬಂದೂಕು ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಕುರಿಗಳು ಮೃತಪಟ್ಟಲ್ಲಿ ಪರಿಹಾರ ಸಿಗುತ್ತಿಲ್ಲ, ಪಶು ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ಹೀಗಾಗಿ ಹಲವು ಸಮಸ್ಯೆಗಳನ್ನು ಬಗೆಹರಿಸುವಂತೆ ಸಿಎಂಗೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

