HomeKarnatakaBIG NEWS: ಬೆಂಗಳೂರು ವಿವಿಯಲ್ಲಿ ‘ಮನಮೋಹನ್ ಸಿಂಗ್ ಸಂಶೋಧನಾ ಕೇಂದ್ರ’ ಆರಂಭ

BIG NEWS: ಬೆಂಗಳೂರು ವಿವಿಯಲ್ಲಿ ‘ಮನಮೋಹನ್ ಸಿಂಗ್ ಸಂಶೋಧನಾ ಕೇಂದ್ರ’ ಆರಂಭ

ಬೆಂಗಳೂರು: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಗೌರವಾರ್ಥ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರ ಪ್ರಾರಂಭಿಸಲು ಚಿಂತನೆ ನಡೆದಿದೆ.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಪರಿವರ್ತನಾತ್ಮಕ ಆರ್ಥಿಕ ಸುಧಾರಣೆಗಳ ಮೂಲಕ ಅವರ ಪರಂಪರೆ ಜೀವಂತವಾಗಿದೆ. ಅವರ ಕೊಡುಗೆಗಳನ್ನು ಗೌರವಿಸಲು, ಅವರ ದೂರದೃಷ್ಟಿಯ ನೀತಿಗಳನ್ನು ಅಧ್ಯಯನ ಮಾಡಲು, ಭಾರತದ ಭವಿಷ್ಯವನ್ನು ರೂಪಿಸಲು ಹಾಗೂ ವಿದ್ಯಾರ್ಥಿಗಳನ್ನು ಪ್ರೇರೇಪಿಸಲು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ಕೇಂದ್ರವನ್ನು ಪ್ರಾರಂಭಿಸಲು ನಾವು ಚಿಂತಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular