HomeKarnatakaಸಹಕಾರಿ ಸಂಸ್ಥೆಗಳಲ್ಲೂ ಮೀಸಲಾತಿ: ಅಧಿನಿಯಮಕ್ಕೆ ತಿದ್ದುಪಡಿ ಮಸೂದೆಗೆ ಅಂಗೀಕಾರ

ಸಹಕಾರಿ ಸಂಸ್ಥೆಗಳಲ್ಲೂ ಮೀಸಲಾತಿ: ಅಧಿನಿಯಮಕ್ಕೆ ತಿದ್ದುಪಡಿ ಮಸೂದೆಗೆ ಅಂಗೀಕಾರ

ಬೆಂಗಳೂರು: ಅಪೆಕ್ಸ್ ಮಂಡಳಿಗಳಲ್ಲಿ ಮೀಸಲಾತಿ ಕಲ್ಪಿಸುವ ಮಸೂದೆಯನ್ನು ಸಹಕಾರ ಸಚಿವ ಕೆ.ಎನ್. ರಾಜಣ್ಣ ವಿಧಾನ ಪರಿಷತ್ ನಲ್ಲಿ ಮಂಡಿಸಿದ್ದಾರೆ.

ಕರ್ನಾಟಕ ಸೌಹಾರ್ದ ಸಹಕಾರಿ(ತಿದ್ದುಪಡಿ) ವಿಧೇಯಕ -2024 ಮತ್ತು ಕರ್ನಾಟಕ ಸಹಕಾರಿ ಸಂಘಗಳ(ತಿದ್ದುಪಡಿ) ವಿಧೇಯಕ -2024ಕ್ಕೆ ವಿಧಾನ ಪರಿಷತ್ ನಲ್ಲಿ ಸೋಮವಾರ ಅಂಗೀಕಾರ ದೊರೆತಿದೆ.

ಸಹಕಾರಿ, ಸಂಯುಕ್ತ ಸಹಕಾರಿ ಮತ್ತು ಅಪೆಕ್ಸ್ ಸಹಕಾರಿ ಮಂಡಳಿಯಲ್ಲಿ ಪ್ರಾತಿನಿತ್ಯ ಇಲ್ಲದ ವರ್ಗದ ಜನರಿಗೆ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ಕರ್ನಾಟಕ ಸೌಹಾರ್ದ ಸಹಕಾರಿ ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ ಎಂದು ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ಈ ವಿಧೇಯಕಕ್ಕೆ ವಿಧಾನಪರಿಷತ್ ನಲ್ಲಿ ಅಂಗೀಕಾರ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular