HomeLatest NewsGOOD NEWS : ಅಂಗವೈಕಲ್ಯವುಳ್ಳ 'ರಾಜ್ಯ ಸರ್ಕಾರಿ ನೌಕರ'ರಿಗೆ ಮುಂಬಡ್ತಿಯಲ್ಲಿ ಮೀಸಲಾತಿ : ಸರ್ಕಾರದಿಂದ...

GOOD NEWS : ಅಂಗವೈಕಲ್ಯವುಳ್ಳ ‘ರಾಜ್ಯ ಸರ್ಕಾರಿ ನೌಕರ’ರಿಗೆ ಮುಂಬಡ್ತಿಯಲ್ಲಿ ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಮುಂಬಡ್ತಿಯಲ್ಲಿ ಮೀಸಲಾತಿ ನೀಡುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ.

ಮೇಲೆ (2)ರಲ್ಲಿ ಓದಲಾದ ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಸೇರಿದ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸುವ ಬಗ್ಗೆ ಸರ್ಕಾರ ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

  1. ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ದಿನಾಂಕ:28.03.2023ರ ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 121 ಸೆನೆನಿ 2020ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ದಿನಾಂಕ:28.03.2023ರ ಆದೇಶದಲ್ಲಿನ ಎಲ್ಲಾ ಷರತ್ತು ಮತ್ತು ಉಪಬಂಧಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ದಿನಾಂಕ:28.11.2023ರ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 266 ಸೆನನಿ 2022ರ ಅನುಬಂಧ-1ರಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಟರ್ ವರ್ತುಲದಲ್ಲಿ 5, 30, 55 ಮತ್ತು 82ನೇ ಮೀಸಲಾತಿ ಬಿಂದುಗಳನ್ನು ಪರಿಗಣಿಸತಕ್ಕದ್ದು.
    ದಿನಾಂಕ:28.11.2023ರ ರೋಸ್ಮರಿನನ್ವಯ ಗ್ರೂಪ್-ಸಿ ಯಿಂದ ಗ್ರೂಪ್-ಬಿ ಮತ್ತು ಗ್ರೂಪ್-ಬಿ ಯಿಂದ ಗ್ರೂಪ್-ಎ (ಕಿರಿಯ ಶ್ರೇಣಿ) ಹುದ್ದೆಗಳಿಗೆ ಈಗಾಗಲೇ ಮುಂಬಡ್ತಿ ನೀಡಿದ್ದಲ್ಲಿ ಯಾವ ಬಿಂದುವಿನವರೆಗೆ ಮುಂಬಡ್ತಿ ನೀಡಲಾಗಿದೆಯೋ ಜಾರಿಗೊಳಿಸತಕ್ಕದ್ದು. ನಂತರದ ಬಿಂದುವಿನಿಂದ 7 ಈ ಆದೇಶವನ್ನು ಸಚಿವ ಸಂಪುಟ ಸಭೆಯ ಪ್ರಕರಣ ಸಂಖ್ಯೆ:249/2025 ದಿನಾಂಕ:09.05.2025ರಲ್ಲಿನ ನಿರ್ಣಯದಂತೆ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular