BIG NEWS : ಎದ್ದು ಕಾಣುವ ‘ಅಂಗವೈಕಲ್ಯ’ ಇರುವ ‘ರಾಜ್ಯ ಸರ್ಕಾರಿ ನೌಕರರಿ’ಗೆ ಬಡ್ತಿಯಲ್ಲಿ ಮೀಸಲಾತಿ : ಸರ್ಕಾರದಿಂದ ಮಹತ್ವದ ಆದೇಶ.!

ಬೆಂಗಳೂರು : ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ರಾಜ್ಯ ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಕುರಿತು ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ನೀಡುವ ಬಡ್ತಿಯಲ್ಲಿ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ಸರ್ಕಾರದ ಆದೇಶ ಹೊರಡಿಸಿದೆ.

ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖ (1)ರ ಸರ್ಕಾರದ ಆದೇಶ ಸಂಖ್ಯೆ:ಸಿಆಸುಇ 121 ಸನನಿ 2020ರಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್ ‘ಡಿ’ ಯಿಂದ ಗ್ರೂಪ್ ‘ಸಿ’ ಮತ್ತು ಗ್ರೂಪ್ ‘ಸಿ’ ಯಿಂದ ಗ್ರೂಪ್ ‘ಬಿ’ ವೃಂದದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದು ಕಾಣುವ ಅಂವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಕಲ್ಪಿಸಲಾಗಿರುವ ಶೇಕಡ 4ರಷ್ಟು ಮೀಸಲಾತಿ ಆಸ್ಪದವನ್ನು ದಿನಾಂಕ:28/03/2023ರ ಆದೇಶದಲ್ಲಿನ ಎಲ್ಲಾ ಷರತ್ತು ಮತ್ತು ಉಪಬಂಧಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಗ್ರೂಪ್ ‘ಸಿ’ ಯಿಂದ ಗ್ರೂಪ್ ‘ಬಿ’ ಮತ್ತು ಗ್ರೂಪ್ ‘ಬಿ’ ಯಿಂದ ಗ್ರೂಪ್ ‘ಎ’ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೂ ಸಹ ವಿಸ್ತರಿಸಿ ಆದೇಶಿಸಿ ಅವಕಾಶ ಕಲ್ಪಿಸಲಾಗಿರುತ್ತದೆ.

ಅದರನ್ವಯ ಜಲಸಂಪನ್ಮೂಲ ಇಲಾಖೆಯಲ್ಲಿ ನೇಮಕಾತಿಗೊಂಡು ಕಾರ್ಯನಿರ್ವಹಿಸುತ್ತಿರುವ ಸಹಾಯಕ ಇಂಜಿನಿಯರರ ಗ್ರೂಪ್ ‘ಬಿ’ ಯಿಂದ ಗ್ರೂಪ್ ‘ಎ’ (ಕಿರಿಯ ಶ್ರೇಣಿ) ವೃಂದದ ಹುದ್ದೆಗಳಿಗೆ ಅಂಗವಿಕಲ ಅಭ್ಯರ್ಥಿ ಮೀಸಲಾತಿಯಡಿಯಲ್ಲಿ ಅರ್ಹ ದಿನಾಂಕದಿಂದ ಮುಂಬಡ್ತಿಗೆ ಪರಿಗಣಿಸಬೇಕೆಂದು ಉಲ್ಲೇಖ (2)ರ ಸರ್ಕಾರದ ಪತ್ರದನ್ವಯ ಅಂಗವೈಕಲ್ಯಕ್ಕೆ ಸಂಬಂಧಿಸಿದಂತೆ ಪ್ರಮಾಣ ಪತ್ರ ಹಾಗೂ ಮೀಸಲಾತಿ ಪರಿಗಣಿಸಬಹುದಾದ ಎಲ್ಲಾ ನೌಕರರ ಇತರೆ ವಿವರಗಳನ್ನು ಜೇಷ್ಮತೆಯನುಸಾರ ಸೂಕ್ತ ಪುಸ್ತಾವನೆಯೊಂದಿಗೆ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.
ಆದ್ದರಿಂದ ಜಲಸಂಪನ್ಮೂಲ ಇಲಾಖೆಯ ಜೇಷ್ಠತೆಯಲ್ಲಿರುವ ಎದ್ದುಕಾಣುವ ಅಂವೈಕಲ್ಯವುಳ್ಳ ಸಹಾಯಕ ಇಂಜಿನಿಯರರ ಸೇವಾ ವಿವರಗಳನ್ನು ಹಾಗೂ ಪ್ರಮಾಣ ಪತ್ರಗಳನ್ನು ದೃಢೀಕರಿಸಿ ಈ ಕಛೇರಿಗೆ ಸಲ್ಲಿಸಲು ಈ ಮೂಲಕ ಕೋರಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read