BIG NEWS: ಹೊರ ಗುತ್ತಿಗೆ ನೇಮಕಾತಿಯಲ್ಲೂ ಮೀಸಲಾತಿ ಕಡ್ಡಾಯ: ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಹೊರಗುತ್ತಿಗೆ ನೇಮಕಾತಿಯಲ್ಲಿಯೂ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ. ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಅಧಿಕೃತ ಆದೇಶ ಹೊರಡಿಸಲಾಗಿದೆ.

ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್, ಸ್ವಚ್ಛತಾ ಸಿಬ್ಬಂದಿ, ಗ್ರೂಪ್ ಡಿ ಹುದ್ದೆಗಳ ಹೊರಗುತ್ತಿಗೆ ನೇಮಕದಲ್ಲಿ ಮೀಸಲಾತಿ ಕಡ್ಡಾಯಗೊಳಿಸಲಾಗಿದೆ. ಇದರ ಅನ್ವಯ ಶೇಕಡ 33 ರಷ್ಟು ಮಹಿಳೆಯರನ್ನು ನೇಮಕ ಮಾಡಿಕೊಳ್ಳಬೇಕಿದೆ. ಈ ಮೂಲಕ ಹೊರಗುತ್ತಿಗೆಯಲ್ಲೂ ಮೀಸಲಾತಿ ಕಡ್ಡಾಯಗೊಳಿಸಿ ಸರ್ಕಾರದಿಂದ ಮಹತ್ವದ ಆದೇಶ ಹೊರಡಿಸಲಾಗಿದೆ.

ರಾಜ್ಯ ಸರ್ಕಾರದ ಕಚೇರಿಗಳಲ್ಲಿನ ವಾಹನ ಚಾಲಕರು, ಡೇಟಾ ಎಂಟ್ರಿ ಆಪರೇಟರ್ ಗಳು, ಸ್ವಚ್ಛತಾ ಸಿಬ್ಬಂದಿ ಗ್ರೂಪ್ ಡಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡಿಕೊಳ್ಳುವುದು ಸರ್ಕಾರದ ಇತ್ತೀಚಿನ ಅಂಗೀಕೃತ ಕಾರ್ಯ ನೀತಿಯಾಗಿದೆ. ಹೊರಗುತ್ತಿಗೆ ನೇಮಕಾತಿಯಲ್ಲಿ ಮೀಸಲಾತಿ ಜಾರಿಗೊಳಿಸಲು 2023ರ ಡಿಸೆಂಬರ್ 21ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಹಾಗಾಗಿ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನಡೆಯುವ ಎಲ್ಲಾ ಹೊರಗುತ್ತಿಗೆ ನೇಮಕಾತಿಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಮೀಸಲಾತಿ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಹೊರಗುತ್ತಿಗೆ ಮೀಸಲಾತಿ ನೀತಿಯು 45 ದಿನಗಳಿಗಿಂತ ಕಡಿಮೆ ಅವಧಿಯ ನೇಮಕಾತಿಗಳಿಗೆ ಅನ್ವಯವಾಗುವುದಿಲ್ಲ.

ಪ್ರತಿ ವರ್ಷವೂ ಹೊರ ಸಂಪನ್ಮೂಲ ಏಜೆನ್ಸಿಗಳಿಂದ ಕೆಟಿಪಿಪಿ ಅಧಿನಿಯಮ 1999 ರಂತೆ ಟೆಂಡರ್ ಕರೆಯುವಾಗ ಕಡ್ಡಾಯವಾಗಿ ಮೀಸಲಾತಿಯಂತೆ ಸಿಬ್ಬಂದಿಗಳನ್ನು ಪಡೆಯಲು ಷರತ್ತುಗಳನ್ನು ನಮೂದಿಸುವುದು.

ಹೊರಗುತ್ತಿಗೆ ನೇಮಕಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳಿಗೆ ನಿಗದಿಪಡಿಸಿದ ಮೀಸಲಾತಿ ಪ್ರಮಾಣದಲ್ಲಿ ಕನಿಷ್ಠ ಶೇಕಡ 33ರಷ್ಟು ಮಹಿಳೆಯರನ್ನು ನೇಮಕಾತಿ ಮಾಡಿಕೊಳ್ಳತಕ್ಕದ್ದು ಎಂದು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read