ಬೆಂಗಳೂರು: ಮೀಸಲಾತಿ ಸಂರಕ್ಷಣಾ ಒಕ್ಕೂಟದಿಂದ ರಾಜ್ಯಪಾಲರನ್ನು ಭೇಟಿ ಮಾಡಲಾಗಿದೆ. ಬೆಂಗಳೂರಿನ ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ.
ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವರ್ಗೀಕರಣದ ವಿಚಾರವಾಗಿ ರಾಜ್ಯಪಾಲರ ಭೇಟಿ ಮಾಡಲಾಗಿದೆ. ಬಂಜಾರ, ಭೋವಿ, ಕೊರಮ, ಕೊರಚ ಸಮುದಾಯ ಮತ್ತು ಅಲೆಮಾರಿ ಸಮುದಾಯಗಳಿಗೆ ಆದ ಅನ್ಯಾಯ ಸರಿಪಡಿಸಲು ಮನವಿ ಮಾಡಲಾಗಿದೆ.
ಬೆಳಗಾವಿ ಅಧಿವೇಶನದಲ್ಲಿ ವಿಧಯಕ ಅಂಗೀಕಾರಗೊಂಡ ಕರ್ನಾಟಕ ಅಧಿಸೂಚಿತ ಜಾತಿಗಳು( ಉಪ ವರ್ಗೀಕರಣ) ವಿಧೇಯಕಕ್ಕೆ ಅಂಕಿತ ಹಾಕದಂತೆ ರಾಜ್ಯಪಾಲರಿಗೆ ನಿಯೋಗ ಮನವಿ ಮಾಡಿದೆ.
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ನೇತೃತ್ವದ ನಿಯೋಗದಲ್ಲಿ ಭೋವಿ ಗುರುಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ, ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಬಿ.ಟಿ. ಲಲಿತಾ ನಾಯಕ್, ಮಾಜಿ ಸಂಸದ ಜನಾರ್ದನ ಸ್ವಾಮಿ, ಮಾಜಿ ಶಾಸಕರಾದ ಭೀಮಾನಾಯ್ಕ್, ಬಸವರಾಜ್ ನಾಯ್ಕ್ ಇದ್ದರು.

