HomeKarnatakaಪ್ರಸಕ್ತ ಅಧಿವೇಶನದಲ್ಲೇ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ಮಸೂದೆ ಮಂಡಿಸದಿದ್ದರೆ ‘ಕರ್ನಾಟಕ ಬಂದ್’ ಎಚ್ಚರಿಕೆ

ಪ್ರಸಕ್ತ ಅಧಿವೇಶನದಲ್ಲೇ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಮೀಸಲಾತಿ ಮಸೂದೆ ಮಂಡಿಸದಿದ್ದರೆ ‘ಕರ್ನಾಟಕ ಬಂದ್’ ಎಚ್ಚರಿಕೆ

ಬೆಂಗಳೂರು: ಪ್ರಸಕ್ತ ಮುಂಗಾರು ಅಧಿವೇಶನದಲ್ಲಿ ಕನ್ನಡಿಗರಿಗೆ ಖಾಸಗಿ ಸಂಸ್ಥೆಗಳಲ್ಲಿ ಉದ್ಯೋಗ ಮೀಸಲಾತಿ ಕುರಿತ ಮಸೂದೆ ಮಂಡಿಸಬೇಕು ಎಂದು ಕನ್ನಡ ಒಕ್ಕೂಟ ಚಳವಳಿಯ ಪ್ರಮುಖ ವಾಟಾಳ್ ನಾಗರಾಜ್ ಒತ್ತಾಯಿಸಿದ್ದಾರೆ.

ಕನ್ನಡಿಗರಿಗೆ ಮೀಸಲಾತಿ ಮಸೂದೆ ಮಂಡನೆ ಮಾಡಬೇಕೆಂದು ಒತ್ತಾಯಿಸಿ ಸೋಮವಾರ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕನ್ನಡ ಒಕ್ಕೂಟದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ವಾಟಾಳ್ ನಾಗರಾಜ್, ಪ್ರಸಕ್ತ ಅಧಿವೇಶನದಲ್ಲಿ ಕನ್ನಡಿಗರಿಗೆ ಖಾಸಗಿ ಕಂಪನಿಗಳಲ್ಲಿ ಉದ್ಯೋಗ ಮೀಸಲಾತಿ ಕುರಿತ ಮಸೂದೆ ಮಂಡಿಸದಿದ್ದರೆ ನಿರಂತರ ಹೋರಾಟ ನಡೆಸಲಾಗುವುದು. ಅಖಂಡ ಕರ್ನಾಟಕ ಬಂದ್ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular