ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ವಸತಿ ಶಾಲೆ, ಏಕಲವ್ಯ ಮಾದರಿ ವಸತಿ ಶಾಲೆ ಹಾಗೂ ಇತರ ವಸತಿ ಶಾಲೆಗಳ ಪ್ರವೇಶಕ್ಕೆ ಸಂಬಂಧಿಸಿದಂತೆ ನಡೆಸಲಾದ ಪರೀಕ್ಷೆ ಗಳ ತಾತ್ಕಾಲಿಕ ಅಂಕ ಪಟ್ಟಿಯನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ಈ ಸಂಬಂಧ ಆಕ್ಷೇಪಣೆಗಳು ಇದ್ದಲ್ಲಿ ಮಾ.18ರಂದು ಸಂಜೆ 5ಗಂಟೆಯೊಳಗೆ ನಿಗದಿತ ಲಿಂಕ್ ಮೂಲಕ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

