BREAKING NEWS: ಇನ್ಮುಂದೆ ವಸತಿ ಶಾಲೆಗಳಲ್ಲಿ ಧಾರ್ಮಿಕ ಹಬ್ಬ ಆಚರಣೆ ಮಾಡುವಂತಿಲ್ಲ; ಸುತ್ತೋಲೆ ಪ್ರಕಟ

ಬೆಂಗಳೂರು: ಇನ್ಮುಂದೆ ವಸತಿ ಶಾಲೆ, ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಹಬ್ಬ ಆಚರಣೆ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.

ವಸತಿ ಶಾಲೆಗಳಲ್ಲಿ ರಾಷ್ಟ್ರೀಯ ಹಬ್ಬಗಳನ್ನು ಹೊರತುಪಡಿಸಿ ಧಾರ್ಮಿಕ ಹಬ್ಬಗಳ ಆಚರಣೆಗೆ ನಿರ್ಬಂಧ ವಿಧಿಸಲಾಗಿದೆ. ಧಾರ್ಮಿಕ ಹಬ್ಬ ಆಚರಣೆ ಮಾಡಿದರೆ ಪ್ರಾಂಶುಪಾಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಹೆಚ್.ಸಿ.ಮಹದೇವಪ್ಪ ಅವರ ಸೂಚನೆ ಮೇರೆಗೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಸುತ್ತೋಲೆ ಹೊರಡಿಸಿದೆ.

ಗಣರಾಜ್ಯೋತ್ಸವ, ಸ್ವಾತಂತ್ರ್ಯ ದಿನಾಚರಣೆ, ಬಸವ ಜಯಂತಿ, ಕನಕ ಜಯಂತಿ, ಸಂವಿಧಾನ ದಿನಾಚರಣೆ, ಯೋಗ ದಿನಾಚರಣೆ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ ಸೇರಿದಂತೆ 10 ರಾಷ್ಟ್ರೀಯ ಹಬ್ಬಗಳನ್ನು ಮಾತ್ರ ಆಚರಿಸಬಹುದು. ಯಾವುದೇ ಧಾರ್ಮಿಕ ಹಬ್ಬಗಳನ್ನು ವಸತಿ ಶಾಲೆ, ಕಾಲೇಜುಗಳಲ್ಲಿ ಆಚರಣೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read