BIG NEWS: ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ; ವಿಧಾನಸಭೆಯಲ್ಲಿ ಪ್ರತಿಧ್ವನಿ

ಬೆಂಗಳೂರು: ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯ ಬದಲಾವಣೆ ಮಾಡಿದ ವಿಚಾರ ವಿಧಾನಮಂಡಲ ಅಧಿವೇಶನದಲ್ಲಿ ಪ್ರತಿಧ್ವನಿಸಿದೆ. ಕುವೆಂಪು ಅವರಿಗೆ ಅವಮಾನ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇದ್ರ ಕಿಡಿಕಾರಿದ್ದಾರೆ.

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ಧ್ವಾರದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯವನ್ನು ತಿದ್ದಿ ಬರೆಯಲಾಗಿತ್ತು. ‘ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾವಣೆ ಮಾಡಲಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ವಾಕ್ಸಮರ ಆರಂಭವಾಗಿದೆ.

ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಾವಣೆ ವಿಚಾರ ಈಗ ವಿಧಾನಸಭೆಯಲ್ಲಿ ಪ್ರತಿಧ್ವನಿಸಿದ್ದು, ಶಾಸಕ ಬಿ.ವೈ.ವಿಜಯೇಂದ್ರ ಈ ಬಗ್ಗೆ ವಿಷಯ ಪ್ರಸ್ತಾಪಿಸಿದ್ದಾರೆ. ಕುವೆಂಪು ಅವರಿಗೆ ಅವಮಾನ ಮಾಡುವ ರೀತಿಯಲ್ಲಿ ಘೋಷವಾಕ್ಯ ಬದಲಿಸಿದ್ದಾರೆ. ಈ ಬಗ್ಗೆ ಸರ್ಕಾರ ಉತ್ತರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಈ ವೇಳೆ ಸ್ಪೀಕರ್ ಯು.ಟಿ.ಖಾದರ್, ವಸತಿ ಶಾಲೆಯಲ್ಲಿ ಘೋಷವಾಕ್ಯ ಬದಲಾವಣೆ ವಿಚರದ ಬಗ್ಗೆ ಸರ್ಕಾರ ನಾಳೆ ಸದನದಲ್ಲಿ ಉತ್ತರ ನೀಡಲಿದೆ ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read