HomeKarnatakaBIG NEWS: ವಸತಿ ಶಾಲೆ ಘೋಷವಾಕ್ಯ ಬದಲಾವಣೆ ವಿಚಾರ: ವಿವಾದದ ಬಳಿಕ ಯಥಾಸ್ಥಿತಿ ಬರೆಸಿದ...

BIG NEWS: ವಸತಿ ಶಾಲೆ ಘೋಷವಾಕ್ಯ ಬದಲಾವಣೆ ವಿಚಾರ: ವಿವಾದದ ಬಳಿಕ ಯಥಾಸ್ಥಿತಿ ಬರೆಸಿದ ಶಾಲೆ ಪ್ರಾಂಶುಪಾಲರು

ವಿಜಯಪುರ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಘಾಳಪೂಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರಾಷ್ಟ್ರಕವಿ ಕುವೆಂಪು ಘೋಷವಾಕ್ಯವನ್ನು ಬದಲಾವಣೆ ಮಾಡಿದ್ದ ಬೆನ್ನಲ್ಲೇ ತೀವ್ರ ವಿವಾದಕ್ಕೆ ಕಾರಣವಾಗಿತ್ತು. ಇದೀಗ ಎಚ್ಚೆತ್ತ ಶಾಲೆಯ ಪ್ರಾಂಶುಪಾಲರು ಘೋಷವಾಕ್ಯವನ್ನು ಯಥಾಸ್ಥಿತಿಯಲ್ಲಿ ಬರೆಸಿದ್ದಾರೆ.

ಘಾಳಪೂಜಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಘೋಷವಾಕ್ಯ ‘ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾವಣೆ ಮಾಡಲಾಗಿತ್ತು. ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಶಾಲೆಯ ಪ್ರಾಂಶುಪಾಲರು, ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ವಿವಾದ ರಾಜಕೀಯ ತಿರುವು ಪಡೆದುಕೊಂಡಿತ್ತು.

ಘೋಷವಾಕ್ಯ ಬದಲಾವಣೆ ತೀವ್ರ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಮೊದಲಿದ್ದ ಘೋಷವಾಕ್ಯವನ್ನೆ ಬರೆಯುವಂತೆ ಶಾಲಾ ಆಡಳಿತ ಮಂಡಳಿಗೆ ಸೂಚಿಸಿದ್ದಾರೆ. ಇದರ ಬೆನ್ನಲ್ಲೇ ಶಾಲೆಯ ಪ್ರಾಂಶುಪಾಲ ದುಂಡಪ್ಪ ಒಡಜೆ ಶಾಲೆಯ ಪ್ರವೇಶ ದ್ವಾರದಲ್ಲಿ ಮೊದಲಿದ್ದ ಘೋಷವಾಕ್ಯ ’ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಎಂದು ಬರೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular