ದೊಡ್ದಬಳ್ಳಾಪುರ: ಹೊಸ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ರೆಸಾರ್ಟ್ ನಲ್ಲಿ ನಡೆಯುತ್ತಿದ್ದ ಪಾರ್ಟಿ ವೇಳೆ ಪೊಲೀಸರು ದಾಳಿ ನಡೆಸಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಹೆಗ್ಗಡಿಹಳ್ಳಿಯಲ್ಲಿ ನಡೆದಿದೆ.
ಈಚೀಸ್ ರೆಸಾರ್ಟ್ ನಲ್ಲಿ ಪಾರ್ಟಿ ನಡೆಯುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ರೆಸಾರ್ಟ್ ನಲ್ಲಿ ಪಾರ್ಟಿ ಮೂಡ್, ಮೋಜು-ಮಸ್ತಿಯಲ್ಲಿ ತೊಡಗಿದ್ದವರು ಪೊಲೀಸರನ್ನು ನೋಡಿ ಕಂಗಾಲಾಗಿದ್ದಾರೆ. ಅನುಮತಿ ಇಲ್ಲದೇ ರೆಸಾರ್ಟ್ ನಲ್ಲಿ ಪಾರ್ಟಿ ಆಯೋಜನೆ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.
ರೆಸಾರ್ಟ್ ನಲ್ಲಿ 40 ಜನ ಯುವಕರು ಸೇರಿ ಪಾರ್ಟಿ ಮಾಡುತ್ತಿದ್ದರು. ದಾಳಿ ವೇಳೆ ಅಪಾರ ಪ್ರಮಾಣದ ಮದ್ಯ ವಶಕ್ಕೆ ಪಡೆಯಲಾಗಿದೆ. ಸೌಂಡ್ ಬಾಕ್ಸ್ ಗಳನ್ನೂ ಜಪ್ತಿ ಮಾಡಲಾಗಿದೆ. ಖಾಸಗಿ ರೆಸಾರ್ಟ್ ಮಾಲೀಕನ ವಿರುದ್ಧ ದೊಡ್ಡಬಳ್ಳಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

