HomeKarnatakaNPS to OPS: ಸರ್ಕಾರಿ ನೌಕರರ ಮಹತ್ವದ ಸಭೆಗೆ ದಿನಾಂಕ ನಿಗದಿ

NPS to OPS: ಸರ್ಕಾರಿ ನೌಕರರ ಮಹತ್ವದ ಸಭೆಗೆ ದಿನಾಂಕ ನಿಗದಿ

ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಮರು ಜಾರಿಗೊಳಿಸಬೇಕು ಎಂಬುದು ಕರ್ನಾಟಕದ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಯಾಗಿದೆ. ಈ ಕುರಿತು ಹಲವು ವರ್ಷಗಳಿಂದ ಹೋರಾಟಗಳು ನಡೆಯುತ್ತಿವೆ. ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಒಪಿಎಸ್ ಜಾರಿಗೊಳಿಸಬೇಕು ಎಂದು ಸರ್ಕಾರಿ ನೌಕರರು ಒತ್ತಡ ಹೇರುತ್ತಿದ್ದಾರೆ.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈಗ ಒಪಿಎಸ್ ಮರು ಜಾರಿ ವಿಚಾರದಲ್ಲಿ ರಾಜ್ಯ ಮಟ್ಟದ ಹೋರಾಟಕ್ಕೆ ತಯಾರಿ ನಡೆಸಿದೆ. ಹೌದು ರಾಜ್ಯ ಕಾರ್ಯಕಾರಿ ಸಮಿತಿ ಸಭೆ ತಿಳುವಳಿಕೆ ಪತ್ರದಲ್ಲಿ ಈ ಕುರಿತು ಮಾಹಿತಿ ನೀಡಲಾಗಿದೆ.

ರಾಜ್ಯ ಸರ್ಕಾರಿ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯ ಮಾಹಿತಿ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ “ರಾಜ್ಯ ಕಾರ್ಯಕಾರಿ ಸಮಿತಿ ಸಭೆ” ಯನ್ನು ದಿನಾಂಕ 01-02-2026ನೇ ಭಾನುವಾರ ಬೆಳಗ್ಗೆ 11 ಗಂಟೆಗೆ ಆಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಸಭೆಯು ಡಾ. ಭೀಮ್‌ಸೇನ್‌ ಜೋಶಿ ಸಭಾಂಗಣ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ, ಗದಗ ಇಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ವಹಿಸಲಿದ್ದಾರೆ. ತಾವು ಈ ಸಭೆಗೆ ತಪ್ಪದೇ ಹಾಜರಾಗಿ ಯಶಸ್ವಿಗೊಳಿಸಲು ಕೋರಿದೆ ಎಂದು ಹೇಳಿದ್ದಾರೆ.

ಸಭೆಯ ವಿಷಯಸೂಚಿಗಳು

* ಹಿಂದಿನ ಮಹಾಸಭೆಯ ನಡವಳಿಗಳನ್ನು ಓದಿ ದಾಖಲಿಸುವುದು.

* ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪಿಸುವ ಸಂಬಂಧ ಸರ್ಕಾರದ ಗಮನ ಸೆಳೆಯಲು ರಾಜ್ಯ ಮಟ್ಟದ ಸಮಾವೇಶ ನಡೆಸುವ ಬಗ್ಗೆ.

* ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ ತಾಂತ್ರಿಕ ಸಮಸ್ಯೆಗಳ ಬಗ್ಗೆ.

* ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ, ಸಿ&ಆರ್ ನಿಯಮ ಹಾಗೂ ಟಿ.ಇ.ಟಿ. ಪರೀಕ್ಷೆ ಸಂಬಂಧ ಗೌರವಾನ್ವಿತ ಸುಪ್ರೀಂಕೋರ್ಟ್ ದಾವೆಯ ಬಗ್ಗೆ.

* ರಾಜ್ಯ ಸರ್ಕಾರಿ ನೌಕರರ ಮೇಲೆ ನಡೆಯುವ ಹಲ್ಲೆ, ದೌರ್ಜನ್ಯ ಪ್ರಕರಣಗಳಿಗೆ ಕಠಿಣ ಕಾನೂನು ರೂಪಿಸುವ ಬಗ್ಗೆ.

* ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಣೆ ಬಗ್ಗೆ.

* ಗಡಿನಾಡ ಕನ್ನಡ ಉತ್ಸವ ಆಚರಿಸುವ ಬಗ್ಗೆ.

* ಸರ್ಕಾರಿ ನೌಕರರ ದಿನಾಚರಣೆ ಬಗ್ಗೆ.

* 2025-26ನೇ ಸಾಲಿನ ರಾಜ್ಯ ಮಟ್ಟದ ರಾಜ್ಯ ಸರ್ಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರ ಆಯೋಜನೆ ಬಗ್ಗೆ.

* ರಾಜ್ಯಾಧ್ಯಕ್ಷರ ಅಪ್ಪಣೆ ಮೇರೆಗೆ ಚರ್ಚಿಸುವ ಇತರೆ ವಿಷಯಗಳು.

ಈ ಸಭೆಯಲ್ಲಿ ರಾಜ್ಯ ಸಂಘದ ಪದಾಧಿಕಾರಿಗಳು, ಎಲ್ಲಾ ಜಿಲ್ಲಾ ಶಾಖೆಗಳ ಜಿಲ್ಲಾಧ್ಯಕ್ಷರು, ಜಿಲ್ಲಾ ಕಾರ್ಯದರ್ಶಿಗಳು, ಜಿಲ್ಲಾ ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರು, ಬೆಂಗಳೂರು ನಗರ ಚುನಾಯಿತ ರಾಜ್ಯ ಪರಿಷತ್ ಸದಸ್ಯರು. ಎಲ್ಲಾ ತಾಲ್ಲೂಕು/ ಯೋಜನಾ ಶಾಖೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಖಜಾಂಚಿ ಮತ್ತು ರಾಜ್ಯ ಪರಿಷತ್ ಸದಸ್ಯರು. ಎಲ್ಲಾ ನಾಮನಿರ್ದೇಶಿತ ಪದಾಧಿಕಾರಿಗಳು ಹಾಗೂ ರಾಜ್ಯ ಪರಿಷತ್‌ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಸಭೆಯಲ್ಲಿ ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪಿಸುವ ಸಂಬಂಧ ಸರ್ಕಾರದ ಗಮನ ಸೆಳೆಯಲು ರಾಜ್ಯ ಮಟ್ಟದ ಸಮಾವೇಶ ನಡೆಸುವ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುತ್ತದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular