BIG NEWS: 370ನೇ ವಿಧಿ ಮರು ಜಾರಿಗೆ ಜಮ್ಮು ಕಾಶ್ಮೀರ ವಿಧಾನಸಭೆ ನಿರ್ಣಯ ಅಂಗೀಕಾರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ಮರು ಜಾರಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸುವ ಗೊತ್ತುವಳಿಯನ್ನು ಭಾರಿ ಗದ್ದಲದ ನಡುವೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಅಂಗೀಕರಿಸಿದೆ.

ಬುಧವಾರ ಕಲಾಪ ಆರಂಭವಾಗುತ್ತಿದ್ದಂತೆ ಗೊತ್ತುವಳಿ ಮಂಡಿಸಿದ ಉಪಮುಖ್ಯಮಂತ್ರಿ ಸುರಿಂದರ್ ಚೌದರಿ ಅವರು, ವಿಶೇಷ ಸ್ಥಾನಮಾನದ ಮಹತ್ವ ಮತ್ತು ರಾಜ್ಯದ ಜನರ ಹೆಗ್ಗುರುತು, ಸಂಸ್ಕೃತಿ ಹಾಗೂ ಹಕ್ಕುಗಳನ್ನು ರಕ್ಷಿಸುವ ಸಾಂವಿಧಾನಿಕ ಗ್ಯಾರಂಟಿಯನ್ನು ಈ ವಿಧಾನಸಭೆ ದೃಢೀಕರಿಸುತ್ತದೆ. ಇಂತಹ ವಿಶೇಷ ಸ್ಥಾನಮಾನವನ್ನು ಏಕಪಕ್ಷೀಯವಾಗಿ ರದ್ದುಗೊಳಿಸಿದ ಕ್ರಮದ ಕುರಿತು ಕಳವಳ ವ್ಯಕ್ತಪಡಿಸುತ್ತದೆ ಎಂದು ಹೇಳಿದ್ದಾರೆ.

ವಿಪಕ್ಷ ಬಿಜೆಪಿ ಸದಸ್ಯರು ಗೊತ್ತುವಳಿ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಲಾಪದ ಪಟ್ಟಿಯಲ್ಲಿ ಇರದ ವಿಷಯುವನ್ನು ಮಂಡಿಸಲಾಗಿದೆ. ನಾವು ಇದನ್ನು ವಿರೋಧಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಂಸತ್ ಕೈಗೊಂಡ ನಿರ್ಧಾರವನ್ನು ಬದಲಾಯಿಸಲಾಗದು ಎಂದು ಗೊತ್ತಿದ್ದರೂ ಪ್ರಚಾರಕ್ಕಾಗಿ ಸುಮ್ಮನೆ ಗದ್ದಲ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸಭೆಯಲ್ಲಿ ಈ ವೇಳೆ ಗದ್ದಲ ಉಂಟಾಗಿದೆ. ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಆರೋಪ, ಪ್ರತ್ಯಾರೋಪ ನಡೆದಿದೆ. ಸ್ಪೀಕರ್ ಗೊತ್ತುವಳಿಯನ್ನು ಧ್ವನಿಮತಕ್ಕೆ ಹಾಕಿ ಅದರ ಮೂಲಕ ಅಂಗೀಕರಿಸಲಾಗಿದೆ ಎಂದು ಘೋಷಿಸಿದ್ದಾರೆ.

ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಓಮರ್ ಅಬ್ದುಲ್ಲಾ ಅವರು, ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರು ಜಾರಿ ಬಗ್ಗೆ ರಾಜ್ಯ ವಿಧಾನಸಭೆ ಏನು ಮಾಡಬಹುದು ಅದನ್ನು ಮಾಡಲಾಗಿದೆ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read