ರಾಜ್ಯದ ಪ್ರಮುಖ ಚಾರಣ ಕೇಂದ್ರಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧ: ಆನ್ಲೈನ್ ಬುಕಿಂಗ್, ಪಾಸ್ ವ್ಯವಸ್ಥೆ

ಮಂಗಳೂರು: ರಾಜ್ಯದ ಪ್ರಮುಖ ಚಾರಣ ಕೇಂದ್ರಗಳಿಗೆ ಸಾರ್ವಜನಿಕರ ಭೇಟಿಗೆ ನಿರ್ಬಂಧಿಸಲು ಸೂಚಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಕುಮಾರಪರ್ವತ ಸೇರಿದಂತೆ ರಾಜ್ಯದ ಪ್ರಮುಖ ಟ್ರೆಕ್ಕಿಂಗ್ ಕೇಂದ್ರಗಳಿಗೆ ಸಾರ್ವಜನಿಕರ ಭೇಟಿ ನಿರ್ಬಂಧಿಸಲು ಸೂಚಿಸಲಾಗಿದೆ. ಅರಣ್ಯ ಪ್ರದೇಶದಲ್ಲಿರುವ ಪ್ರಮುಖ ಚಾರಣ ಪಥಗಳಿಗೆ ಏಕಕಾಲದಲ್ಲಿ ಎಷ್ಟು ಚಾರಣಿಗರು ಭೇಟಿ ನೀಡಲು ಅವಕಾಶ ನೀಡಬಹುದು? ಸುತ್ತಮುತ್ತಲ ಪ್ರದೇಶದಲ್ಲಿನ ಮೂಲಸೌಕರ್ಯ ಕುರಿತು ಸಮಗ್ರ ಯೋಜನಾ ವರದಿ ಸಿದ್ದಪಡಿಸಲು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಅಲ್ಲದೇ, ಚಾರಣಕ್ಕೆ ಆನ್ಲೈನ್ ಮೂಲಕ ಬುಕಿಂಗ್ ವ್ಯವಸ್ಥೆ ಮಾಡಿ, ಚಾರಣಿಗರಿಗೆ ಪಾಸ್ ನೀಡಲಾಗುತ್ತದೆ ಎಂದು ಸಚಿವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read