HomeKarnatakaಪರೀಕ್ಷೆ ಮುಗಿದ ಕೇವಲ 48 ಗಂಟೆಯೊಳಗೆ ಫಲಿತಾಂಶ ಪ್ರಕಟಿಸಿದ ಕುವೆಂಪು ವಿವಿ ಹೊಸ ದಾಖಲೆ

ಪರೀಕ್ಷೆ ಮುಗಿದ ಕೇವಲ 48 ಗಂಟೆಯೊಳಗೆ ಫಲಿತಾಂಶ ಪ್ರಕಟಿಸಿದ ಕುವೆಂಪು ವಿವಿ ಹೊಸ ದಾಖಲೆ

ಶಿವಮೊಗ್ಗ: ಪರೀಕ್ಷೆ ಮುಗಿದ ಕೇವಲ 48 ಗಂಟೆಯೊಳಗೆ ಫಲಿತಾಂಶ ಪ್ರಕಟಿಸುವ ಮೂಲಕ ಕುವೆಂಪು ವಿವಿ ಹೊಸ ಶೈಕ್ಷಣಿಕ ದಾಖಲೆ ಬರೆದಿದೆ.

ಬಿಸಿಎ ಪದವಿಯ 5 ಮತ್ತು 6ನೇ ಸೆಮಿಸ್ಟರ್ ಗಳಿಗೆ ಸೆಪ್ಟೆಂಬರ್ 12ರಂದು ಪರೀಕ್ಷೆ ನಡೆದಿದ್ದು, ಕುವೆಂಪು ವಿವಿ ಸೆಪ್ಟೆಂಬರ್ 14ರಂದು ಫಲಿತಾಂಶ ಪ್ರಕಟಿಸಿದೆ. ಶೀಘ್ರ ಮೌಲ್ಯಮಾಪನಕ್ಕೆ ಹೆಸರಾದ ಕುವೆಂಪು ವಿವಿ ಈ ಹಿಂದೆಯೂ ಶೀಘ್ರವಾಗಿ ಫಲಿತಾಂಶ ನೀಡಿ ವಿದ್ಯಾರ್ಥಿಗಳಿಗೆ ನೆರವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತುತ ನಾನ್ ಎನ್ಇಪಿ ಬ್ಯಾಚ್ ನ ಬಿಸಿಎ ಪದವಿಯ 5 ಮತ್ತು 6ನೇ ಸೆಮಿಸ್ಟರ್ ಗಳ ಪರೀಕ್ಷೆ ಮುಕ್ತಾಯವಾದ ಎರಡು ದಿನದೊಳಗೆ ಫಲಿತಾಂಶ ಪ್ರಕಟಿಸಲಾಗಿದೆ. ವಿದ್ಯಾರ್ಥಿಗಳ ಪೋರ್ಟಲ್ ನಲ್ಲಿಯೂ ಫಲಿತಾಂಶ ಲಭ್ಯವಿದೆ. ಅವರ ಮೊಬೈಲ್ ಸಂಖ್ಯೆಗೆ ಮೆಸೇಜ್ ಮೂಲಕ ಫಲಿತಾಂಶ ತಲುಪಿಸಲಾಗಿದೆ.

ಪರೀಕ್ಷಾಂಗ ಕುಲಸಚಿವ ಪ್ರೊ. ಎಸ್.ಎಂ. ಗೋಪಿನಾಥ್ ಅವರು ಶೀಘ್ರ ಫಲಿತಾಂಶ ಪ್ರಕಟಣೆ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಫಲಿತಾಂಶ ಪ್ರಕಟಿಸಲು ಕುವೆಂಪು ವಿವಿ ಪರೀಕ್ಷಾಂಗ ಸಿಬ್ಬಂದಿ, ಬೋಧಕ ವರ್ಗ ಶ್ರಮಿಸಿದೆ. ಅವರ ಸಹಕಾರದಿಂದ ಬೇಗನೆ ಫಲಿತಾಂಶ ನೀಡಿ ವಿದ್ಯಾರ್ಥಿಗಳಿಗೆ ಮುಂದಿನ ವ್ಯಾಸಂಗ ಮತ್ತು ಉದ್ಯೋಗಕ್ಕೆ ಅನುಕೂಲವಾಗುವಂತೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular