HomeKarnatakaBREAKING : 'ಗ್ರಾಮ ಆಡಳಿತ ಅಧಿಕಾರಿ' ಹುದ್ದೆ ಪರೀಕ್ಷೆಯ ಫಲಿತಾಂಶ ಪ್ರಕಟ, ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

BREAKING : ‘ಗ್ರಾಮ ಆಡಳಿತ ಅಧಿಕಾರಿ’ ಹುದ್ದೆ ಪರೀಕ್ಷೆಯ ಫಲಿತಾಂಶ ಪ್ರಕಟ, ಅಭ್ಯರ್ಥಿಗಳಿಗೆ ಇಲ್ಲಿದೆ ಮಾಹಿತಿ

ಬೆಂಗಳೂರು : ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಯ ಪತ್ರಿಕೆ 1 & 2 ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಅಂಕ ಪಟ್ಟಿಯನ್ನು #KEA ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ.

ಆಕ್ಷೇಪಣೆಗಳು ಇದ್ದಲ್ಲಿ ನ.28ರೊಳಗೆ ಲಿಂಕ್ ಮೂಲಕ ಪೂರಕ ದಾಖಲೆಗಳ ಸಮೇತ ಸಲ್ಲಿಸಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ 2024 ನೇ ಫೆಬ್ರವರಿಯಲ್ಲಿ ಅರ್ಜಿ ಆಹ್ವಾನಿಸಲಾಗಿತ್ತು.

ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ, ದಿನಾಂಕ 27.10.2024 ರಂದು ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯ ಪತ್ರಿಕೆ-1 ಮತ್ತು ಪತ್ರಿಕೆ-2ರ ಕೀ ಉತ್ತರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಮಾಹಿತಿಗಾಗಿ ಪ್ರಕಟಿಸಿ, ದಿನಾಂಕ 04.11.2024 ರ ವರೆಗೆ ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಪ್ರಾಧಿಕಾರಕ್ಕೆ ಸಲ್ಲಿಸುವಂತೆ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಿನಾಂಕ 04.11.2024 ರ ವರೆಗೆ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಅಂತಿಮ ಕೀ ಉತ್ತರಗಳನ್ನು ಹಾಗೂ ತಾತ್ಕಾಲಿಕ ಅಂಕಪಟ್ಟಿಯನ್ನು ದಿನಾಂಕ 27.11.2024 ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದ್ದು, ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ 28.11.2024 ಸಂಜೆ 4.00 ರೊಳಗೆ ಪ್ರಾಧಿಕಾರದ ವೆಬ್ಸೈಟ್ನಲ್ಲಿ ಒದಗಿಸಲಾದ ಲಿಂಕ್ ಮೂಲಕ ಆಕ್ಷೇಪಣೆಯನ್ನು ಸಲ್ಲಿಸುವಂತೆ ಈ ಮೂಲಕ ತಿಳಿಸಿದೆ.ತಾತ್ಕಾಲಿಕ ಅಂಕಗಳ ಹೊರತುಪಡಿಸಿ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಮತ್ತು ಪೂರಕ ದಾಖಲೆಗಳಿಲ್ಲದ ಆಕ್ಷೇಪಣೆಗಳನ್ನು ಪುರಸ್ಕರಿಸಲಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular