HomeBusinessBIG NEWS: ಇನ್ನು ಎಪಿಎಂಸಿಗಳಲ್ಲಿ ಚಿಲ್ಲರೆ ವಹಿವಾಟಿಗೂ ಅವಕಾಶ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

BIG NEWS: ಇನ್ನು ಎಪಿಎಂಸಿಗಳಲ್ಲಿ ಚಿಲ್ಲರೆ ವಹಿವಾಟಿಗೂ ಅವಕಾಶ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

ಬೆಂಗಳೂರು: ರಾಜ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣಗಳಲ್ಲಿ ಸಗಟು ಮಾರಾಟದೊಂದಿಗೆ ಚಿಲ್ಲರೆ ವಹಿವಾಟಿಗೂ ಅವಕಾಶ ಕಲ್ಪಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಪಿಎಂಸಿಗಳಲ್ಲಿ ಚಿಲ್ಲರೆ ವಹಿವಾಟಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ನಿಯಂತ್ರಣ ಮತ್ತು ಅಭಿವೃದ್ಧಿ ತಿದ್ದುಪಡಿ ಮಸೂದೆ -2025ಕ್ಕೆ ಅನುಮೋದನೆ ನೀಡಲಾಗಿದೆ.

ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು, ಬಜೆಟ್ ಅಧಿವೇಶನದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ ತಿದ್ದುಪಡಿ ಮಸೂದೆ ಮಂಡಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೋರ್ಟ್ ನಿರ್ದೇಶನದ ಮೇರೆಗೆ ಚಿಲ್ಲರೆ ವಹಿವಾಟಿಗೆ ಅವಕಾಶ ಕಲ್ಪಿಸಬೇಕಿತ್ತು. ಇದಕ್ಕಾಗಿ ಮಸೂದೆಗೆ ತಿದ್ದುಪಡಿ ಅಗತ್ಯವಿದೆ. ಇದುವರೆಗೆ ಎಪಿಎಂಸಿಗಳಲ್ಲಿ ಸಗಟು ವಹಿವಾಟು ನಡೆಸಲು ಮಾತ್ರ ಅವಕಾಶ ಇತ್ತು. ಚಿಲ್ಲರೆ ವಹಿವಾಟಿಗೂ ಅವಕಾಶ ನೀಡುವುದರಿಂದ ಕೃಷಿ ಉತ್ಪನ್ನ ಮಾರುಕಟ್ಟೆಯ ವ್ಯಾಪ್ತಿ ವಿಸ್ತಾರವಾಗಲಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular