ಬೆಂಗಳೂರು: ಹೊಸ ರೇಷನ್ ಕಾರ್ಡ್ ಪಡೆಯಲು ಮುಂದಾದವರಿಗೆ ಆಹಾರ ಇಲಾಖೆ ಶಾಕ್ ನೀಡಿದೆ. ಸರ್ಕಾರದಿಂದ ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಹಂಚಿಕೆ ಇಲ್ಲ ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಈ ಬಗ್ಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕೇಂದ್ರ ನಿಗದಿ ಮಡಿದ್ದ ರೇಷನ್ ಕಾರ್ಡ್ ನಿಗದಿ ಗುರಿ ಮುಕ್ತಾಯವಾಗಿದೆ. ಹೊಸ ಕಾರ್ಡ್ ಕೊಡಲು ಅವಕಾಶವಿಲ್ಲ. ಅನರ್ಹರ ಕಾರ್ಡ್ ರದ್ದು ಮಡುವವರೆಗೂ ಹೊಸ ಕಾರ್ಡ್ ಗಳನ್ನು ಕೊಡುವುದಿಲ್ಲ ಎಂದರು.
ಹೀಗಾಗಿ ಹೊಸ ಅರ್ಜಿ ಹಾಕಿರುವ ಜನರು ಬಿಪಿಎಲ್ ಕಾರ್ಡ್ ಗಳಿಗಾಗಿ ಕಾಯಬೇಕು ಎಂದು ತಿಳಿಸಿದ್ದಾರೆ. ಸದ್ಯಕ್ಕೆ ಹೊಸ ರೇಷನ್ ಕಾರ್ಡ್ ಕೊಡಲು ಸರ್ಕಾರದಲ್ಲಿ ಅವಕಾಶವಿಲ್ಲ. ಕೇಂದ್ರ ಸರ್ಕಾರದ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ಅನ್ವಯ 4,01,93,000ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಣೆ ಮಾಡಲು ಗುರಿ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.