BIG NEWS: 11 ಲಕ್ಷ ರೇಷನ್ ಕಾರ್ಡ್ ರದ್ದು ಮಾಡಲು ಮುಂದಾದ ಸರ್ಕಾರ: ಪ್ರತಿಭಟನೆಗೆ ಸಜ್ಜಾದ ಬಿಜೆಪಿ

ಬೆಳಗಾವಿ: 11 ಲಕ್ಷ ರೇಷನ್ ಕಾರ್ಡ್ ಗಳನ್ನು ರದ್ದು ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿರುವ ಬಗ್ಗೆ ಕಿಡಿಕಾರಿರುವ ಬಿಜೆಪಿ ಶಾಸಕ ಸುನೀಲ್ ಕುಮಾರ್, ಸರ್ಕಾರದ ಧೋರಣೆ ಖಂಡಿಸಿ ಹಳ್ಳಿ ಹಳ್ಳಿಗಳಲ್ಲಿಯೂ ಬಿಜೆಪಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುನೀಲ್ ಕುಮಾರ್, ಗ್ಯಾರಂಟಿ ‌ಯೋಜನೆ ಜಾರಿ ಮಾಡುವಾಗ ಆರ್ಥಿಕ ಸ್ಥಿತಿಗತಿಗಳ‌ ಕುರಿತು ಅಧ್ಯಯನ ಮಾಡದೆ ಅವೈಜ್ಞಾನಿಕವಾಗಿ ಜಾರಿ ಮಾಡಿದ್ದಾರೆ. ಈಗ ಸಂಪನ್ಮೂಲಗಳ ಕ್ರೋಢೀಕರಣಕ್ಕಾಗಿ ಬೆಲೆ ಏರಿಕೆ ಮಾಡಿದ ಬಳಿಕ, ರೇಷನ್ ಕಾರ್ಡ್‌ಗಳನ್ನ ರದ್ದು ಪಡಿಸಲು ಸರ್ಕಾರ ಮುಂದಾಗಿರುವುದು ದುರಾದೃಷ್ಟಕರ ಎಂದು ಗುಡುಗಿದ್ದಾರೆ.

ಯಾವುದೇ ಕಾರಣಕ್ಕೂ ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ರದ್ದು ಮಾಡಬಾರದು. ಸರ್ಕಾರದ ಈ ಜನವಿರೋಧಿ ನೀತಿಯ ವಿರುದ್ಧ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪ್ರತಿಭಟಿಸಲಿದೆ ಎಂದು ತಿಳಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read