ಬೆಂಗಳೂರು: ರಾಜ್ಯದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿ ಪಲ್ಲವಿಯನ್ನು ಸಿಸಿಬಿ 7 ದಿನ ಕಸ್ಟಡಿಗೆ ಪಡೆದುಕೊಂಡಿದೆ.
ಕೊಲೆ ಪ್ರಕರಣದ ತನಿಖೆ ಸಿಸಿಬಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ಆರಂಭಗೊಂಡಿದ್ದು, ಪಲ್ಲವಿಯನ್ನು ವಿಚಾರಣೆಗೊಳಪಡಿಸಲಾಗಿದೆ. ಈಗಾಗಲೇ ಪತಿ ಪಲ್ಲವಿ ತಾನೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ.
ಓಂ ಪ್ರಕಾಶ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪತ್ನಿ ಪಲ್ಲವಿಯನ್ನು ಮೇ 3ರವರೆಗೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಬೆಂಗಳೂರಿನ 39ನೇ ಎಸಿಎಂಎಂ ನ್ಯಾಯಾಲಯ ಜಡ್ಜ್ ಆದೇಶಿಸಿದ್ದರು. ಈ ನಡುವೆ ಆರೋಪಿ ಪಲ್ಲವಿಯನ್ನು ಸಿಸಿಬಿ 7 ದಿನ ಕಸ್ಟಡಿಗೆ ಪಡೆದುಕೊಂಡಿದೆ.
ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಎ 2 ಆರೋಪಿಯಾಗಿರುವ ಪುತ್ರಿ ಕೃತಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದು, ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೊಲೆ ಪ್ರಕರಣ ಬೆಳಕಿಗೆ ಬಂದ ನಂತರ ಇಬ್ಬರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಿದ ಪೊಲೀಸರು ಮಹಿಳಾ ಸಾಂತ್ವನ ಕೇಂದ್ರಕ್ಕೆ ಕಳಿಸಿದ್ದರು..