ಬೆಂಗಳೂರು: ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾಯಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಓಂ ಪ್ರಕಾಶ್ ಹತ್ಯೆ ಪ್ರಕರಣದ ಬಗ್ಗೆ ಹೆಚ್ಚಿನ ತನಿಖೆ ನಡೆಸಿವ ನಿಟ್ಟಿನಲ್ಲಿ ತನಿಖೆ ಸಿಸಿಬಿಗೆ ವರ್ಗಾಯಿಸಲಾಗಿದೆ. ಪೊಲೀಸರು ಸೂಕ್ತ ತನಿಖೆ ನಡೆಸಲಿದ್ದಾರೆ ಎಂದು ಹೇಳಿದರು.
ಇದೇ ವೇಳೆ ಓಂ ಪ್ರಕಾಶ್ ಪತ್ನಿ ಪಲ್ಲವಿ ಹಾಗೂ ಮಗಳು ಹತ್ಯೆ ಮಾಡಿರುವ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ. ಓಂ ಪ್ರಕಾಶ್ ಪತ್ನಿ ವಾಟ್ಸಪ್ ಮೆಸೇಜ್ ಗಳ ಬಗ್ಗೆ ನನಗೆ ಮಾಹಿತಿ ಇಲ್ಲ. ಪೊಲೀಸರು ಎಲ್ಲವನ್ನೂ ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.