ದಾವಣಗೆರೆ: ನಿವೃತ್ತ ಡಿವೈಎಸ್ಪಿ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯ ಕೆಟಿಜೆ ನಗರದಲ್ಲಿ ನಡೆದಿದೆ.
ಹೆಚ್.ವೈ. ತುರಾಯಿ(70) ಆತ್ಮಹತ್ಯೆ ಮಾಡಿಕೊಂಡವರು. ಗುಂಡು ಹಾರಿದ ಶಬ್ದ ಕೇಳಿ ಅಕ್ಕ-ಪಕ್ಕದ ಮನೆಯವರು ಪರಿಶೀಲಿಸಿದಾಗ ತುರಾಯಿ ಮೃತಪಟ್ಟಿರುವುದು ಗೊತ್ತಾಗಿದೆ. ತುರಾಯಿ ಅವರು ಮನೆಯಲ್ಲಿ ಒಬ್ಬರೇ ಇದ್ದರು. 2014ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದ ತುರಾಯಿ ಅವರಿಗೆ ಆರೋಗ್ಯ ಸಮಸ್ಯೆ ಕಾಡಿದ್ದು, ಕೌಟುಂಬಿಕ ಸಮಸ್ಯೆಯಿಂದಲೂ ಮನನೊಂದಿದ್ದರು ಎಂದು ಹೇಳಲಾಗಿದೆ.
ಕೆಟಿಜೆ ನಗರ ಠಾಣೆ ಪೊಲೀಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

