C.M Siddaramaiah : ‘ಹೊಂದಾಣಿಕೆ ರಾಜಕಾರಣ’ ಸಾಬೀತಾದ್ರೆ ರಾಜಕೀಯ ನಿವೃತ್ತಿ : ಸಿಎಂ ಸಿದ್ದರಾಮಯ್ಯ ಸವಾಲ್

ಬೆಂಗಳೂರು : ನಾನು ನನ್ನ ಜೀವನದಲ್ಲಿ ‘ಹೊಂದಾಣಿಕೆ ರಾಜಕಾರಣ ‘ ಮಾಡಿಲ್ಲ, ಒಂದು ವೇಳೆ ಮಾಡಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ಇಂದು ವಿಧಾನಸೌಧದಲ್ಲಿ ಪ್ರತಿಪಕ್ಷಗಳ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದರು. ಹೆಚ್ ಡಿ ಕುಮಾರಸ್ವಾಮಿ ಮಾತನಾಡುತ್ತಿದ್ದ ವೇಳೆ ಮಧ್ಯಪ್ರವೇಶಿಸಿದ ಸಿದ್ದರಾಮಯ್ಯ  1983  ರಿಂದ ಸದನದಲ್ಲಿದ್ದೇನೆ, ನನ್ನ ಜತೆ ಸದನಕ್ಕೆ ಬಂದವರಲ್ಲಿ ಬಿ.ಆರ್ ಪಾಟೀಲ್, ದೇಶ್ಪಾಂಡೆ ಬಿಟ್ಟು ಬೇರೆಯವರ್ಯಾರು ಇಲ್ಲ, ಅಂದಿನಿಂದ ಇಲ್ಲಿಯವರೆಗೆ ಎಂದಿಗೂ ಹೊಂದಾಣಿಕೆ ರಾಜಕಾರಣ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ನಾನು ವಿರೋಧ ಪಕ್ಷದಲ್ಲಿದ್ದಾಗ ಯಾವುದೇ ಸಚಿವರ ಮನೆಗೆ ಹೋಗಿದ್ದಾಗಲಿ, ಹೊಂದಾಣಿಕೆ ಮಾಡಿಕೊಂಡಿದ್ದಾಗಲಿ ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲ್ ಹಾಕಿದರು.

ಇದೇ ವೇಳೆ ‘ನನಗೆ ಬಂದಿರುವ ಮಾಹಿತಿ ಪ್ರಕಾರ ನಿಮ್ಮನ್ನು ವಿರೋಧ ಪಕ್ಷದ ನಾಯಕ ಮಾಡಲ್ಲ ಎಂದು ಮತ್ತೆ ಬಸನಗೌಡ ಪಾಟೀಲ್ ಯತ್ನಾಳ್’ ಗೆ ಸಿಎಂ ಸಿದ್ದರಾಮಯ್ಯ ಕಿಚಾಯಿಸಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿರುವಾಗ ಉಚಿತ ಭಾಗ್ಯಗಳ ಬಗ್ಗೆ ಯತ್ನಾಳ್ ದನಿ ಎತ್ತಿದರು. ಅವರಿಗೂ ಫ್ರೀ..ನಿನಗೂ ಫ್ರೀ ಎಂದು ಹೇಳಿದ್ದರು. ಈಕೆ ಕಂಡೀಷನ್ ಹಾಕಿದ್ದಾರೆ..ಹಾಗೆ ಹೀಗೆ…ಎಂದು ಯತ್ನಾಳ್ ಎದ್ದು ನಿಂತು ಮಾತನಾಡಲು ಶುರು ಮಾಡಿದರು. ಅದಕ್ಕೆ ಕಿಚಾಯಿಸಿದ ಸಿಎಂ ಸಿದ್ದರಾಮಯ್ಯ ನೀವು ಸದನದಲ್ಲಿ ಪದೇ ಪದೇ ಎದ್ದು ನಿಂತು ಮಾತನಾಡಿದ್ರೆ ನಿಮ್ಮನ್ನು ವಿರೋಧ ಪಕ್ಷದ ನಾಯಕ ಮಾಡಲ್ಲ, ಸುಮ್ಮನೆ ಕೊತ್ಕೊಳ್ಳಿ.. ಎಂದು ಯತ್ನಾಳ್ ಗೆ ಸಿಎಂ ಸಿದ್ದರಾಮಯ್ಯ ಕಿಚಾಯಿಸಿದ್ದಾರೆ. ಈ ವೇಳೆ ಸದನದಲ್ಲಿ ಎಲ್ಲರೂ ನಕ್ಕರು.

 

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read