BREAKING: ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ.

ಕೆಂಪನಹಳ್ಳಿ ಗ್ರಾಮದ ನಿವಾಸಿ ರೇವಣ್ಣ (65) ಮೃತ ವ್ಯಕ್ತಿ. ರಾಮನಗರ ತಾಲೂಕಿನ ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಈ ದುರಂತ ಸಂಭವಿಸಿದೆ. ದೇವರ ದರ್ಶನಕ್ಕೆಂದು ಹೋಗುತ್ತಿದ್ದರು. ಈ ವೇಳೆ ಕಾಲು ಜಾರಿ ಬಿದ್ದವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read