ಪರಪ್ಪನ ಅಗ್ರಹಾರದಲ್ಲಿ ನಿದ್ರೆ ಇಲ್ಲದೆ ರಾತ್ರಿ ಕಳೆದ ರೇವಣ್ಣ…!

ಲೈಂಗಿಕ ದೌರ್ಜನ್ಯಕ್ಕೊಳಗಾದ ಸಂತ್ರಸ್ತೆಯನ್ನು ಕಿಡ್ನ್ಯಾಪ್ ಮಾಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೆ ಗುರಿಯಾಗಿ ಕಳೆದ ಎರಡು ದಿನಗಳಿಂದ ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಹೊಳೆನರಸೀಪುರ ಕ್ಷೇತ್ರದ ಶಾಸಕ ಎಚ್.ಡಿ. ರೇವಣ್ಣ ಗುರುವಾರ ತಮಗೆ ಜಾಮೀನು ಸಿಗಬಹುದೆಂಬ ನಿರೀಕ್ಷೆ ಹೊಂದಿದ್ದು, ಅದು ಹುಸಿಯಾಗಿರುವ ಕಾರಣ ಮಂಕಾಗಿದ್ದಾರೆ ಎನ್ನಲಾಗಿದೆ.

ಕಳೆದ ರಾತ್ರಿ ರೇವಣ್ಣ ಅವರಿಗೆ ಮುದ್ದೆ, ಚಪಾತಿ, ಅನ್ನ, ಸಾಂಬಾರ್ ನೀಡಿದ್ದು ತಡವಾಗಿ ಊಟ ಮಾಡಿದರು ಎನ್ನಲಾಗಿದೆ. ಅಲ್ಲದೆ ರಾತ್ರಿಯಿಡಿ ನಿದ್ರೆ ಇಲ್ಲದೆ ಕಾಲ ಕಳೆದಿದ್ದಾರೆ. ಹೊಟ್ಟೆ ನೋವಿನಿಂದ ಬಳಲುತ್ತಿರುವ ರೇವಣ್ಣ ಅವರ ಆರೋಗ್ಯದ ಮೇಲೆ ಕಾರಾಗೃಹದ ವೈದ್ಯರು ನಿಗಾ ವಹಿಸಿದ್ದಾರೆ ಎಂದು ತಿಳಿದುಬಂದಿದೆ.

ಜಾಮೀನು ಕೋರಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆಯಾಗಿದ್ದು, ಅಂದಾದರೂ ತಮಗೆ ರಿಲೀಫ್ ಸಿಗಬಹುದಾ ಎಂಬ ನಿರೀಕ್ಷೆಯಲ್ಲಿ ರೇವಣ್ಣ ಇದ್ದಾರೆ. ಅಲ್ಲದೆ ತಮ್ಮನ್ನು ಭೇಟಿಯಾಗಲು ಬಂದವರ ಬಳಿ ರೇವಣ್ಣ, ತಮ್ಮ ಮನಸ್ಸಿನ ದುಗುಡ ತೋಡಿಕೊಂಡಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read