‘ವಾಸ್ತು ಪ್ರಕಾರ’ವೇ ಕೆಲಸ ಮಾಡಲು ಅಧಿಕಾರಿಗಳಿಗೆ ಶಾಸಕ ಎಚ್.ಡಿ. ರೇವಣ್ಣ ಸಲಹೆ

ಸ್ಪೀಕರ್‌ ಕುರ್ಚಿ ವಾಸ್ತು ಬಗ್ಗೆ ಎಚ್‌.ಡಿ.ರೇವಣ್ಣರನ್ನು ಕೇಳಿ: ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆ

ಜೆಡಿಎಸ್ ನಾಯಕ, ಮಾಜಿ ಸಚಿವ ಎಚ್.ಡಿ. ರೇವಣ್ಣ ಅಪಾರ ದೈವಭಕ್ತರು. ಏನೇ ಕೆಲಸ ಮಾಡಬೇಕೆಂದರೂ ಅವರು ವಾಸ್ತು, ಜ್ಯೋತಿಷ್ಯದ ಮೊರೆ ಹೋಗುತ್ತಾರೆ. ಇದೀಗ ಅಧಿಕಾರಿಗಳಿಗೂ ಸಹ ಅವರು ವಾಸ್ತು ಪ್ರಕಾರವೇ ಕೆಲಸ ಮಾಡಿ ಎಂದು ಸಲಹೆ ನೀಡಿದ್ದಾರೆ.

ಗುರುವಾರದಂದು ರೇವಣ್ಣನವರು ಹಾಸನದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಮಾತನಾಡಿದ ಅವರು, ನೂತನವಾಗಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಕೇಂದ್ರವನ್ನು ವಾಸ್ತು ಪ್ರಕಾರವೇ ಅಳವಡಿಸಿ ಎಂದು ಸೂಚಿಸಿದ್ದಾರೆ.

200 ಕೋಟಿ ರೂಪಾಯಿ ವೆಚ್ಚದಲ್ಲಿ ಎಲ್ಲ ಚಿಕಿತ್ಸಾ ಸೌಲಭ್ಯ ಸಿಗುವ ಈ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ವಾಸ್ತು ಪ್ರಕಾರವೇ ನಾನು ನಿರ್ಮಾಣ ಮಾಡಿಸಿದ್ದೇನೆ. ಇದೀಗ ವಿದ್ಯುತ್ ಕೇಂದ್ರವನ್ನು ವಾಸ್ತು ಪ್ರಕಾರ ದಕ್ಷಿಣ ಅಥವಾ ಉತ್ತರ ದಿಕ್ಕಿನಲ್ಲಿ ಹಾಕಬೇಕಾ ಎಂಬುದರ ಕುರಿತು ಪರಿಶೀಲಿಸಿ ಎಂದು ಅಧಿಕಾರಿಗಳಿಗೆ ಶಾಸಕ ರೇವಣ್ಣ ಸಲಹೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read