ರೇಣುಕಾಸ್ವಾಮಿ ಕೊಲೆ ತನಿಖೆಯಲ್ಲಿ ಬಯಲಾಯ್ತು ಮತ್ತೊಂದು ಆಘಾತಕಾರಿ ಮಾಹಿತಿ: ಕರೆಂಟ್ ಶಾಕ್ ನೀಡಿ ದರ್ಶನ್ ಗ್ಯಾಂಗ್ ನಿಂದ ಚಿತ್ರಹಿಂಸೆ

ಬೆಂಗಳೂರು: ನಟ ದರ್ಶನ್ ಮತ್ತು ಆತನ ಸಹಚರರು ಚಿತ್ರದುರ್ಗದ ರೇಣುಕಾಸ್ವಾಮಿ ಮೇಲೆ ದೈಹಿಕ ಹಲ್ಲೆ ಮಾಡಿದ್ದು ಮಾತ್ರವಲ್ಲದೆ ಆತನಿಗೆ ವಿದ್ಯುತ್ ಶಾಕ್ ಕೂಡ ನೀಡಿದ್ದರು ಎಂಬ ಆಘಾತಕಾರಿ ಸಂಗತಿ ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.

ರೇಣುಕಾಸ್ವಾಮಿಗೆ ವಿದ್ಯುತ್ ಶಾಕ್ ನೀಡಿ ಹಿಂಸೆ ನೀಡಲಾಗಿದ್ದ ಮಾಹಿತಿಯನ್ನು ಸರ್ಕಾರಿ ವಿಶೇಷ ಅಭಿಯೋಜಕರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. SPP ಪಿ. ಪ್ರಸನ್ನಕುಮಾರ್ ಅವರು ಈ ಬಗ್ಗೆ ಕೋರ್ಟ್ ಗೆ ಮಾಹಿತಿ ನೀಡಿದ್ದು, ಕರೆಂಟ್ ಶಾಕ್ ನೀಡಿದ್ದ ಸಲಕರಣೆ ಜಪ್ತಿ ಮಾಡಬೇಕಿರುವ ಕಾರಣ ದರ್ಶನ್ ಮತ್ತು ಸಹಚರರನ್ನು ಮತ್ತೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ವಾದ ಮಂಡಿಸಿದ್ದಾರೆ.

ರೇಣುಕಾಸ್ವಾಮಿಗೆ ಕಾಲಿನಿಂದ ಫುಟ್ಬಾಲ್ ನಂತೆ ಒದ್ದು, ಮರ್ಮಾಂಗಕ್ಕೆ ಹೊಡೆದು ಕೈಕಾಲುಗಳನ್ನು ಹಿಡಿದು ಜೋಲಿ ಆಡಿ ದೊಣ್ಣೆ, ಮರದ ತುಂಡುಗಳು ಹಾಗೂ ಹಗ್ಗದಿಂದ ಹೊಡೆದು ಮನಬಂದಂತೆ ಚಿತ್ರ ಹಿಂಸೆ ನೀಡಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು. ಆತನಿಗೆ ವಿದ್ಯುತ್ ಶಾಕ್ ಸಹ ಕೊಡಲಾಗಿದೆ ಎಂಬುದು ಬಹಿರಂಗವಾಗಿದೆ.

ದರ್ಶನ್ ಆಪ್ತ ದೀಪಕ್ ಕುಮಾರ್, ನಂದೀಶ್ ಅವರು ರೇಣುಕಾಸ್ವಾಮೀಗೆ ವಿದ್ಯುತ್ ಶಾಕ್ ಕೊಟ್ಟಿದ್ದಾರೆ ಎನ್ನಲಾಗಿದೆ. ವಿದ್ಯುತ್ ಶಾಕ್ ನೀಡಿದ್ದ ದೀಪಕ್ ಕುಮಾರ್ ಬೆಂಗಳೂರು ನಗರದ ಪ್ರಭಾವಿ ಬಿಜೆಪಿ ಶಾಸಕರೊಬ್ಬರ ಸಂಬಂಧಿಯಾಗಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read