HomeKarnatakaರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಸೇವೆ ಸರಳವಾಗಿ ಸಕಾಲದಲ್ಲಿ ತಲುಪಿಸಲು ಜನಸ್ನೇಹಿಯಾಗಿ ಕಂದಾಯ ಇಲಾಖೆ

ರಾಜ್ಯದ ಜನತೆಗೆ ಗುಡ್ ನ್ಯೂಸ್: ಎಲ್ಲಾ ಸೇವೆ ಸರಳವಾಗಿ ಸಕಾಲದಲ್ಲಿ ತಲುಪಿಸಲು ಜನಸ್ನೇಹಿಯಾಗಿ ಕಂದಾಯ ಇಲಾಖೆ

ಬೆಂಗಳೂರು: ಕಂದಾಯ ಇಲಾಖೆಯನ್ನು ಮತ್ತಷ್ಟು ಜವಾಬ್ದಾರಿಯುತ ಮತ್ತು ಜನಸ್ನೇಹಿಯಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಕಂದಾಯ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವುದಾಗಿ ಘೋಷಣೆ ಮಾಡಲಾಗಿದೆ. ಜನಸಾಮಾನ್ಯರ ದೈನಂದಿನ ಜೀವನದೊಂದಿಗೆ ನೇರ ಸಂಬಂಧ ಹೊಂದಿದ ಮತ್ತು ಸರ್ಕಾರದ ವರ್ಚಸ್ಸಿನ ಮೇಲೆ ನೇರ ಪರಿಣಾಮ ಬೀರುವ ಕಂದಾಯ ಇಲಾಖೆಯನ್ನು ಜವಾಬ್ದಾರಿಯುತವಾಗಿ ರೂಪಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಲಾಖೆಯ ಆಡಳಿತದಲ್ಲಿ ದಕ್ಷತೆ ಹೆಚ್ಚಿಸುವ ಜೊತೆಗೆ ಎಲ್ಲಾ ಸೇವೆಗಳನ್ನು ಸರಳವಾಗಿ ಸಕಾಲದಲ್ಲಿ ಜನರಿಗೆ ತಲುಪಿಸಲು ಕ್ರಮ ಕೈಗೊಳ್ಳಲಾಗುತ್ತದೆ. ಪರಿಶಿಷ್ಟರಿಗೆ ಮಂಜೂರಾಗಿರುವ ಜಮೀನುಗಳ ರಕ್ಷಣೆಗೆ ಒತ್ತು ನೀಡಲು ಪಿಟಿಸಿಎಲ್ ಕಾಯ್ದೆಗೆ ಸೂಕ್ತ ತಿದ್ದುಪಡಿ ಮಾಡಲಾಗುತ್ತದೆ. ಜನದಟ್ಟಣೆ ಇರುವ ಬೆಂಗಳೂರಿನ 8 ಸಬ್ ರಿಜಿಸ್ಟ್ರಾರ್ ಕಚೇರಿಗಳಿಗೆ ಹೆಚ್ಚುವರಿ ಮೂಲ ಸೌಕರ್ಯ ಕಲ್ಪಿಸುವ ಮೂಲಕ ಜನಸ್ನೇಹಿ ಕಚೇರಿಗಳಾಗಿ ಮೇಲ್ದರ್ಜೆಗೇರಿಸಲಾಗುತ್ತದೆ. ಕೃಷಿಯೇತರ ಉದ್ದೇಶಕ್ಕೆ ಭೂಪರಿವರ್ತನೆಗೆ ಅವಕಾಶ ಕಲ್ಪಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ ಸೆಕ್ಷನ್ 95ಕ್ಕೆ ತಿದ್ದುಪಡಿ ತರಲಾಗುವುದು ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular