ಯಾದಗಿರಿ: ಅಕ್ರಮ ಗಣಿಗಾರಿಕೆಯಲ್ಲಿ ಶಾಮಿಲಾದ ಆರೋಪದ ಮೇಲೆ ಕಂದಾಯ ನಿರೀಕ್ಷಕ ಮತ್ತು ಗ್ರಾಮ ಆಡಳಿತ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ದೋರನಹಳ್ಳಿಯ ಕಂದಾಯ ನಿರೀಕ್ಷಕ ಮಹೇಂದ್ರಸ್ವಾಮಿ ಮತ್ತು ಗ್ರಾಮ ಆಡಳಿತಾಧಿಕಾರಿ ದೇವೇಂದ್ರಪ್ಪ ಅಮಾನತುಗೊಂಡವರು. ಯಾದಗಿರಿ ಜಿಲ್ಲಾಧಿಕಾರಿ ಹರ್ಷಲ್ ಬೋಯರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಅಕ್ರಮ ಗಣಿಗಾರಿಕೆಯಲ್ಲಿ ಇವರಿಬ್ಬರು ಶಾಮೀಲಾಗಿರುವ ಆಡಿಯೋ ವೈರಲ್ ಆದ ಬೆನ್ನಲ್ಲೇ ಪರಿಶೀಲನೆ ನಡೆಸಿ ಇಬ್ಬರನ್ನು ಅಮಾನತು ಮಾಡಲಾಗಿದೆ.