ಸಿಎಂ ಅಧ್ಯಕ್ಷತೆಯ 7 ಪ್ರಾಧಿಕಾರಗಳಿಗೆ ಇನ್ನು ಕಂದಾಯ ಸಚಿವರೇ ಅಧ್ಯಕ್ಷರು: ಅಧಿವೇಶನದಲ್ಲಿ 7 ಮಸೂದೆ ಮಂಡನೆಗೆ ಸಂಪುಟ ನಿರ್ಧಾರ

ಬೆಂಗಳೂರು: ಈವರೆಗೆ ಕಂದಾಯ ಇಲಾಖೆಯಡಿ ಕಾರ್ಯನಿರ್ವಹಿಸುವ 7 ಪ್ರಾಧಿಕಾರಗಳಿಗೆ ಮುಖ್ಯಮಂತ್ರಿಗಳು ಅಧ್ಯಕ್ಷರಾಗಿದ್ದರು. ಇನ್ನು ಮುಂದೆ ಕಂದಾಯ ಸಚಿವರನ್ನೇ ಅಧ್ಯಕ್ಷರನ್ನಾಗಿ ನೇಮಕ ಮಾಡಲು ತೀರ್ಮಾನಿಸಲಾಗಿದ್ದು, ಅದಕ್ಕಾಗಿ ಸಂಬಂಧಪಟ್ಟ ಮಂಡಳಿ/ಪ್ರಾಧಿಕಾರಗಳ ಅಧಿನಿಯಮ ತಿದ್ದುಪಡಿಗೆ ನಿರ್ಧರಿಸಲಾಗಿದೆ.

ಹೀಗಾಗಿ ಈ 7 ಮಸೂದೆಗಳನ್ನು ವಿಧಾನಮಂಡಲದ ಮುಂದೆ ಮಂಡಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

1. ಕೂಡಲ ಸಂಗಮ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ಮಸೂದೆ 2025

2. ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ಮಸೂದೆ 2025

3. ಬಸವಕಲ್ಯಾಣ ಅಭಿವೃದ್ಧಿ ಮಂಡಳಿ(ತಿದ್ದುಪಡಿ) ಬಿಲ್ 2025

4. ಬನವಾಸಿ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ಮಸೂದೆ 2025

5. ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ಮಸೂದೆ 2025

6. ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ 2025

7. ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣದ ಅಭಿವೃದ್ಧಿ ಪ್ರಾಧಿಕಾರ(ತಿದ್ದುಪಡಿ) ಮಸೂದೆ 2025

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read