HomeKarnatakaಔಷಧ ಖರೀದಿ ಲೋಪಗಳ ತನಿಖೆಗೆ ಮಹತ್ವದ ಕ್ರಮ

ಔಷಧ ಖರೀದಿ ಲೋಪಗಳ ತನಿಖೆಗೆ ಮಹತ್ವದ ಕ್ರಮ

ಬೆಂಗಳೂರು: ಟೆಂಡರ್‌ ಮೂಲಕ ಔಷಧಗಳ ಖರೀದಿ ಮತ್ತು ಎಂಪ್ಯಾನಲ್ಡ್‌ ಪ್ರಯೋಗಾಲಯಗಳಲ್ಲಿ ಔಷಧಗಳ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸುವಾಗ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮದಲ್ಲಿ ಆಗಿರುವ ಲೋಪಗಳ ಕುರಿತು ಪರಿಶೀಲಿಸಿ ವರದಿ ನೀಡಲು ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕಿ ಎಂ. ಕನಗವಲ್ಲಿ ನೇತೃತ್ವದ ಪರಿಶೀಲನಾ ತಂಡ ರಚಿಸಲಾಗಿದೆ.

ತಂಡದಲ್ಲಿ ಔಷಧ ನಿಯಂತ್ರಣ ಇಲಾಖೆ ಕೇಂದ್ರ ಕಚೇರಿಯ ಸಹಾಯಕ ಔಷಧ ನಿಯಂತ್ರಕ ವೆಂಕಟೇಶ್, ಬೆಂಗಳೂರು ಮೆಡಿಕಲ್ ಕಾಲೇಜಿನ ಮೈಕ್ರೋ ಬಯಾಲಜಿ ಡಾ. ಅಸಿಮಾ ಬಾನು, ರಾಜೀವ್ ಗಾಂಧಿ ಆರೋಗ್ಯ ವಿವಿ ಕುಲಪತಿಯಿಂದ ನಾಮ ನಿರ್ದೇಶಕರಾದ ಹಿರಿಯ ಫಾರ್ಮಾಲಜಿ ಪ್ರಾಧ್ಯಾಪಕರು ಇರುತ್ತಾರೆ.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾದ ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯ ಸಮಿತಿಗೆ ಐದು ದಿನದಲ್ಲಿ ವರದಿ ಸಲ್ಲಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ ಅಧಿಕಾರಿಗಳ ಪಾತ್ರ ಮತ್ತು ಲೋಪ ಎಸಗಿದ ಅಧಿಕಾರಿಗಳ ಮೇಲೆ ಜವಾಬ್ದಾರಿ ನಿಗದಿಪಡಿಸುವ ಕುರಿತು ಹಾಗೂ ವ್ಯವಸ್ಥೆಗಳ ಬಗ್ಗೆ ಈ ತಂಡ ಪರಿಶೀಲನೆ ನಡೆಸಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular