ಬೆಂಗಳೂರು: ಕೇಂದ್ರ ಲೋಕಸೇವಾ ಆಯೋಗದ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿ ಪಡೆಯುವ ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ಆಯ್ಕೆ ಸಲುವಾಗಿ ನಡೆಸಿದ ಲಿಖಿತ ಪರೀಕ್ಷೆಯ ಪರಿಷ್ಕೃತ ಕೀ ಉತ್ತರಗಳನ್ನು #KEA ಪ್ರಕಟಿಸಿದೆ.
ನ.15ರಂದು ಲಿಖಿತ ಪರೀಕ್ಷೆಯನ್ನು ಆಯೋಜಿಸಲಾಗಿತ್ತು. ಕೀ ಉತ್ತರಗಳಿಗೆ ಬಂದಿದ್ದ ಆಕ್ಷೇಪಣೆಗಳನ್ನು ವಿಷಯ ತಜ್ಞರು ಪರಿಶೀಲಿಸಿದ ನಂತರ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

