HomeLive NewsBIG NEWS : 'UGCET 'ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ, ಅಭ್ಯರ್ಥಿಗಳಿ್ಗೆ ಇಲ್ಲಿದೆ ಮುಖ್ಯ...

BIG NEWS : ‘UGCET ‘ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ, ಅಭ್ಯರ್ಥಿಗಳಿ್ಗೆ ಇಲ್ಲಿದೆ ಮುಖ್ಯ ಮಾಹಿತಿ |UGCET 2025

ಬೆಂಗಳೂರು :  ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ದಿನಾಂಕ:16.04.2025 ಮತ್ತು 17.04.2025 ರಂದು ಪರೀಕ್ಷೆಗಳನ್ನು ನಡೆಸಲಾಗಿದೆ. ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ದಿನಾಂಕ:18.04.2025 ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ: 22-04-2025ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು.

ಅದರಂತೆ ಪ್ರಾಧಿಕಾರದಲ್ಲಿ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಗಳ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಸಮಿತಿಗಳ ಶಿಫಾರಸ್ಸಿನಂತೆ ಭೌತಶಾಸ್ತ್ರ, ರಸಾಯನಶಾಸ್ತ್ರ, ಮತ್ತು ಜೀವಶಾಸ್ತ್ರ ವಿಷಯಗಳಲ್ಲಿ ಬದಲಾವಣೆಗೊಂಡ ಪ್ರಶ್ನೆಗಳ ಪರಿಷ್ಕೃತ ಕೀ ಉತ್ತರಗಳನ್ನು ಪ್ರಕಟಿಸಲಾಗಿದೆ ಎಂದು ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular