HomeKarnatakaBREAKING NEWS: 1 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: RFO, ಚಾಲಕ ಅರೆಸ್ಟ್

BREAKING NEWS: 1 ಲಕ್ಷ ರೂ. ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ದಾಳಿ: RFO, ಚಾಲಕ ಅರೆಸ್ಟ್

ಮಂಡ್ಯ: 1 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಆರ್.ಎಫ್.ಒ. ಮತ್ತು ಚಾಲಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ವಲಯ ಅರಣ್ಯ ಅಧಿಕಾರಿ ಪುಟ್ಟಸ್ವಾಮಿ, ವಾಹನ ಚಾಲಕ ಪ್ರಸನ್ನಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದವರು.

ಸ್ಟೋನ್ ಕ್ರಷರ್ ಗೆ ಎನ್ಒಸಿ ನೀಡಲು 10 ಲಕ್ಷ ರೂಪಾಯಿ ಲಂಚಕ್ಕೆ ಪುಟ್ಟಸ್ವಾಮಿ ಬೇಡಿಕೆ ಇಟ್ಟಿದ್ದರು. ಚಾಲಕ ಪ್ರಸನ್ನಕುಮಾರ್ ಮೂಲಕ ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದಿದ್ದಾರೆ.

ಸಂತೋಷ್ ಎಂಬುವರಿಂದ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಆರ್.ಎಫ್.ಒ. ಪುಟ್ಟಸ್ವಾಮಿ ಮತ್ತು ಚಾಲಕ ಪ್ರಸನ್ನಕುಮಾರ್ ಅವರನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್‌ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular