HomeKarnatakaಅಕ್ಕಿ ಕೊಡದ ಕೇಂದ್ರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ, ಪ್ರಧಾನಿಗೆ ಪತ್ರ ಚಳವಳಿ: ಕಾಂಗ್ರೆಸ್ ವಿರುದ್ಧ...

ಅಕ್ಕಿ ಕೊಡದ ಕೇಂದ್ರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ, ಪ್ರಧಾನಿಗೆ ಪತ್ರ ಚಳವಳಿ: ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದಲೂ ಧರಣಿ

ಬೆಂಗಳೂರು: ಹೆಚ್ಚುವರಿಯಾಗಿ ಅಕ್ಕಿ ಪೂರೈಸಲು ಕೇಂದ್ರ ನಿರಾಕರಿಸಿದ ಹಿನ್ನೆಲೆಯಲ್ಲಿ ಇಂದು ಕೇಂದ್ರ ಸರ್ಕಾರದ ವಿರುದ್ಧ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ನಿಂದ ಪ್ರತಿಭಟನೆ ಕೈಗೊಳ್ಳಲಾಗಿದೆ.

ಕೇಂದ್ರ ವಿರುದ್ಧ ಪ್ರತಿಭಟನೆಯ ಜೊತೆಗೆ ಪತ್ರ ಚಳವಳಿಗೆ ಕಾಂಗ್ರೆಸ್ ಕರೆ ನೀಡಿದೆ. ಅಕ್ಕಿ ಪೂರೈಕೆಗೆ ಒತ್ತಾಯಿಸಿ ಪ್ರಧಾನಿಗೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪತ್ರ ಬರೆಯಲಿದ್ದಾರೆ. ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಿಂದಲೂ ಅಕ್ಕಿ ನೀಡಲು ಒತ್ತಾಯಿಸಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯಲಾಗುವುದು. ಪತ್ರ ಬರೆಯುವ ಮೂಲಕ ಕಾಂಗ್ರೆಸ್ ನಾಯಕರು ಆಕ್ರೋಶ ಹೊರಹಾಕಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೇಂದ್ರ ಸರ್ಕಾರದ ವಿರುದ್ಧ ಇಂದು ಕಾಂಗ್ರೆಸ್ ಪ್ರತಿಭಟನೆ ಕೈಗೊಂಡ ಹಿನ್ನೆಲೆಯಲ್ಲಿ ಬಿಜೆಪಿಯಿಂದಲೂ ರಾಜ್ಯದ 10 ಸ್ಥಳಗಳಲ್ಲಿ ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ಕೈಗೊಳ್ಳಲಾಗಿದೆ. ಬೆಂಗಳೂರು, ಮಂಗಳೂರು, ಕಲಬುರ್ಗಿ, ಬೆಳಗಾವಿ, ಮೈಸೂರು, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ತುಮಕೂರಿನಲ್ಲಿ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ.

ಬೆಂಗಳೂರಿನ ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಬಳಿ ಬೆಳಗ್ಗೆ 11 ಗಂಟೆಗೆ ಧರಣಿ ನಡೆಯಲಿದ್ದು, ಬಿಜೆಪಿ ನಾಯಕರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದ್ದು, ಮಾಜಿ ಸಿಎಂ ಡಿ.ವಿ. ಸದಾನಂದಗೌಡ, ಮಾಜಿ ಡಿಸಿಎಂ ಆರ್. ಅಶೋಕ ಬೆಂಗಳೂರಿನ ಬಿಜೆಪಿ ಶಾಸಕರು, ಮಾಜಿ ಕಾರ್ಪೊರೇಟರ್ ಗಳು ಭಾಗವಹಿಸಲಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular