HomeKarnatakaBIG NEWS: ಬಿಪಿಎಲ್, ಅಂತ್ಯೋದಯ ಕಾರ್ಡ್ 'ಅನ್ನಭಾಗ್ಯ ಯೋಜನೆ' ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು...

BIG NEWS: ಬಿಪಿಎಲ್, ಅಂತ್ಯೋದಯ ಕಾರ್ಡ್ ‘ಅನ್ನಭಾಗ್ಯ ಯೋಜನೆ’ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಬದಲು ‘ಹಣ ವಿತರಣೆ’ ಮುಂದುವರಿಕೆ

ಬೆಂಗಳೂರು: ಅಕ್ಟೋಬರ್ ನಲ್ಲಿ ಅನ್ನಭಾಗ್ಯ ಯೋಜನೆಗೆ ಅಕ್ಕಿ ಸಿಗುವುದು ಅನುಮಾನವಾಗಿದ್ದು, 5 ಕೆಜಿ ಅಕ್ಕಿ ಬದಲಾಗಿ ನಗದು ವಿತರಣೆ ಮುಂದುವರೆಸಲಾಗುವುದು.

ಅಕ್ಕಿ ಖರೀದಿಗೆ ಸರ್ಕಾರ ಪ್ರಯತ್ನ ನಡೆಸಿದೆ. ಫಲಾನುಭವಿಗಳಿಗೆ ಅಕ್ಟೋಬರ್ ತಿಂಗಳಲ್ಲಿ 10 ಕೆಜಿ ಆಹಾರ ಧಾನ್ಯ ಸಿಗುವುದು ಅನುಮಾನವಾಗಿದ್ದು, ಐದು ಕೆಜಿ ಅಕ್ಕಿ ಬದಲಿಗೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಸಂದಾಯ ಮಾಡುವುದನ್ನು ಮುಂದುವರಿಸಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆ ಅಡಿ ಫಲಾನುಭವಿಗಳಿಗೆ 10 ಕೆಜಿ ಅಕ್ಕಿ ಕೊಡಲು ಪ್ರಯತ್ನ ನಡೆಸಿದ್ದು, ಅಕ್ಕಿ ಖರೀದಿಗೆ ನಡೆಸಿದ ಪ್ರಯತ್ನ ಸಫಲವಾಗಿಲ್ಲ. ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಗುರುವಾರ ಅಕ್ಟೋಬರ್ ನಿಂದಲೇ ಅಕ್ಕಿ ಕೊಡುತ್ತೇವೆ ಎಂದು ಹೇಳಿದ್ದರು. ಇನ್ನು ಅಕ್ಕಿ ಖರೀದಿ ಪ್ರಕ್ರಿಯೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ ನಗದು ವಿತರಣೆ ಮುಂದುವರೆಸಲಾಗುವುದು.

ಅಂತ್ಯೋದಯ, ಬಿಪಿಎಲ್ ಕಾರ್ಡುಗಳ 1.03 ಕೋಟಿ ಪಡಿತರ ಚೀಟಿದಾರರಿದ್ದು, 3.69 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಪ್ರತಿ ತಿಂಗಳು 5 ಕೆಜಿ ಅಕ್ಕಿಗೆ 605 ಕೋಟಿ ರೂ. ಹಣ ಡಿಬಿಟಿ ಮೂಲಕ ಸಂದಾಯ ಮಾಡಲಾಗುತ್ತದೆ. ಜುಲೈ, ಆಗಸ್ಟ್ ತಿಂಗಳಲ್ಲಿ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡಿದ್ದು, ಸೆಪ್ಟಂಬರ್ ತಿಂಗಳು ಪೂರ್ಣಗೊಂಡರೂ ಖಾತೆಗೆ ಹಣ ಜಮಾ ಆಗಿಲ್ಲ ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular