
ನವದೆಹಲಿ: ಪಡಿತರದಲ್ಲಿ ಗೋಧಿ, ಸಕ್ಕರೆ, ಅಡುಗೆ ಎಣ್ಣೆ, ಬೇಳೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ.
ಪ್ರಸ್ತುತ ಪಡಿತರ ಚೀಟಿಯಲ್ಲಿ ನೀಡಲಾಗುತ್ತಿರುವ ಅಕ್ಕಿ, ರಾಗಿ, ಜೋಳದ ಜೊತೆಗೆ ಗೋಧಿ, ಅಡುಗೆ ಎಣ್ಣೆ, ಸಕ್ಕರೆ, ಬೇಳೆ ಕಾಳುಗಳನ್ನು ಕೂಡ ನೀಡುವಂತೆ ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರಾದ ಪ್ರಲ್ಹಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.
ದೆಹಲಿ ಭೇಟಿಯ ವೇಳೆ ಕೇಂದ್ರ ಸಚಿವರಿಗೆ ಮನವಿ ಮಾಡಿರುವ ಮುನಿಯಪ್ಪ, ಪಡಿತರದಲ್ಲಿ ಅಕ್ಕಿ, ರಾಗಿ, ಜೋಳದ ಜೊತೆಗೆ ಗೋಧಿ, ಸಕ್ಕರೆ, ಅಡುಗೆ ಎಣ್ಣೆ, ಬೇಳೆ ನೀಡಲು ಕೋರಿದ್ದಾರೆ.