HomeKarnatakaBREAKING : ಅಕ್ಕಿ ಕಳ್ಳತನ ಪ್ರಕರಣ ; ಬಿಜೆಪಿ ಮುಖಂಡ 'ಮಣಿಕಂಠ ರಾಠೋಡ್' ಪೊಲೀಸ್ ವಶಕ್ಕೆ..!

BREAKING : ಅಕ್ಕಿ ಕಳ್ಳತನ ಪ್ರಕರಣ ; ಬಿಜೆಪಿ ಮುಖಂಡ ‘ಮಣಿಕಂಠ ರಾಠೋಡ್’ ಪೊಲೀಸ್ ವಶಕ್ಕೆ..!

ಕಲಬುರಗಿ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಶಹಾಪುರ ಪೊಲೀಸರ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಬಂಧಿಸಿದ್ದಾರೆ. 2 ಕೋಟಿಗೂ ಹೆಚ್ಚು 6,077 ಕ್ವಿಂಟಾಲ್ ಅಕ್ಕಿ ಕಳ್ಳತನ ಪ್ರಕರಣದಲ್ಲಿ ಕಲಬುರಗಿಯಲ್ಲಿ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ಸರ್ಕಾರಿ ಗೋದಾಮಿನಲ್ಲಿ ಅಕ್ಕಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ನೀಡಿದ್ದರು. ಇದೀಗ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶಹಾಪುರದಲ್ಲಿ ಇತ್ತೀಚೆಗೆ ಅನ್ನಭಾಗ್ಯ ಪಡಿತರ ಅಕ್ಕಿ ಕಳ್ಳತನ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ದಂಧೆಕೋರರು ಯಾವುದೇ ಭಯವಿಲ್ಲದೇ ರಾಜಾರೋಷವಾಗಿ ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಿಸುತ್ತಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular