ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಸೇತುವೆ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಸವಾರ ಹಿನ್ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.
ನಿವೃತ್ತ ಶಿಕ್ಷಕ ಗಣೇಶ(61) ಮೃತಪಟ್ಟವರು. ಶಾಲಾ ಮುಖ್ಯ ಶಿಕ್ಷಕರಾಗಿದ್ದ ಇವರು ಕೆಲವು ತಿಂಗಳ ಹಿಂದೆಯಷ್ಟೇ ನಿವೃತ್ತರಾಗಿದ್ದರು. ಬಸವನ ಬ್ಯಾಣದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಘಟನೆ ನಡೆದಿದೆ. ಹಿನ್ನೀರಿನಲ್ಲಿ ಬಿದ್ದಿದ್ದ ಬೈಕ್ ಮತ್ತು ಮೃತದೇಹ ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಸಹಕಾರದಿಂದ ಬೈಕ್, ಮೃತದೇಹವನ್ನು ಹೊರಗೆ ತೆಗೆಯಲಾಗಿದೆ.

