ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.
ರಾಮನಗರದ ಬಿಡದಿ ಬಳಿಯ ಅವರ ಮನೆ ಬಳಿಯೇ ಫೈರಿಂಗ್ ನಡೆದಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರಿಕ್ಕಿ ರೈ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಈ ನಡುವೆ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ ಮುತ್ತಪ್ಪ ರೈ ಎರಡನೇ ಪತ್ನಿ ಸೇರಿ ನಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬಿಡದಿ ಠಾಣೆಯಲ್ಲಿ ರಿಕ್ಕಿ ರೈ ಕಾರು ಚಾಲಕ ಬಸವರಾಜು ನೀಡಿದ ದೂರಿನ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ರಾಕೇಶ್ ಮಲ್ಲಿ, ಅನುರಾಧ, ನಿತೇಶ್ ಶೆಟ್ಟಿ ಹಾಗೂ ವೈದ್ಯನಾಥ್ ಎಂಬುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಬಿಎನ್ ಎಸ್ 109(5) ಹಾಗೂ ಆರ್ಮ್ಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.