HomeLatest NewsBREAKING NEWS: ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ ಎರಡನೇ ಪತ್ನಿ ಸೇರಿ...

BREAKING NEWS: ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮುತ್ತಪ್ಪ ರೈ ಎರಡನೇ ಪತ್ನಿ ಸೇರಿ ನಾಲ್ವರ ವಿರುದ್ಧ FIR ದಾಖಲು

ರಾಮನಗರ: ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ರಿಕ್ಕಿ ರೈ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದ್ದಾರೆ.

ರಾಮನಗರದ ಬಿಡದಿ ಬಳಿಯ ಅವರ ಮನೆ ಬಳಿಯೇ ಫೈರಿಂಗ್ ನಡೆದಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ರಿಕ್ಕಿ ರೈ ಅವರನ್ನು ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಈ ನಡುವೆ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ ಸಂಬಂಧ ಮುತ್ತಪ್ಪ ರೈ ಎರಡನೇ ಪತ್ನಿ ಸೇರಿ ನಲವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಡದಿ ಠಾಣೆಯಲ್ಲಿ ರಿಕ್ಕಿ ರೈ ಕಾರು ಚಾಲಕ ಬಸವರಾಜು ನೀಡಿದ ದೂರಿನ ಹಿನ್ನೆಲೆಯಲ್ಲಿ ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ರಾಕೇಶ್ ಮಲ್ಲಿ, ಅನುರಾಧ, ನಿತೇಶ್ ಶೆಟ್ಟಿ ಹಾಗೂ ವೈದ್ಯನಾಥ್ ಎಂಬುವವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬಿಎನ್ ಎಸ್ 109(5) ಹಾಗೂ ಆರ್ಮ್ಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular