ಬೆಂಗಳೂರು: ಐಷಾರಾಮಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ಪ್ರಕರಣದ ಬೆನ್ನಲ್ಲೇ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಾರು ರಿಜಿಸ್ಟರ್ ಮಾಡದೇ ಕಲರ್ ಬದಲಿಸಿ ತೆರಿಗೆ ಪಾಅವತಿಸದೇ ಸರ್ಕಾರಕ್ಕೆ ವಂಚಿಸಿರುವ ಆರೋಪ ಹಿನ್ನೆಲೆಯಲ್ಲಿ ರಿಕ್ಕಿ ರೈ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಕಬ್ಬನ್ ಪಾರ್ಕ್ ಪೊಲೀಸರು ಕಾರ್ ಡ್ರಿಫ್ಟ್ಂಗ್ ಕೇಸ್ ಸಂಬಂಧ ಕಾರಿನ ದಾಖಲೆ ಪರಿಶೀಲನೆ ನಡೆಸಿದಾಗ ಈ ವಿಚಾರ ಬಯಲಾಗಿದೆ. ದೆಹಲಿಯಲ್ಲಿ ಆರ್.ಟಿ.ಒ ಹರಾಜಿನಲ್ಲಿ ರಿಕ್ಕಿ ರೈ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದರು. ಬಳಿಕ ಕಲರ್ ಬದಲಿಸಿ ಅದಕ್ಕೆ ಫ್ಯಾನ್ಸಿ ನಂಬರ್ ಪಡೆದಿದ್ದಾರೆ. ಕಾರು ರಿಜಿಸ್ಟರ್ ಮಾಡಿಸಿಲ್ಲ. ಈ ಮೂಲಕ ಲಕ್ಷಾಂತರ ರೂಪಾಯಿ ತೆರಿಗೆ ವಂಚಿಸಿದ್ದಾರೆ ಎನ್ನಲಾಗಿದೆ.
ನಿಯಮ ಉಲ್ಲಂಘನೆ ಮಾಡುವ ಮೂಲಕ ಸರ್ಕಾರಕ್ಕೆ ವಂಚಿಸಿದ್ದು, ಕಬ್ಬನ್ ಪಾರ್ಕ್ ಪೊಲೀಸರು ನೀಡಿರುವ ದೂರಿನ ಮೇರೆಗೆ ಕಾನೂನು ಸುವ್ಯವಸ್ಥೆ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

