
ಇನ್ ಸ್ಟಾಗ್ರಾಂ ನಲ್ಲಿ ಅನ್ಯಕೋಮಿನ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ ಹಿಂದೂ ಯುವಕರ ಮೇಲೆ ಅನ್ಯ ಕೋಮಿನ ಯುವಕರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಅಕ್ಬರ್, ಶಾಮೀದ್, ಸಮೀರ್, ತಾಜುದ್ದೀನ್ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಯುವತಿ ಹೆಸರಿನಲ್ಲಿ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ ಹಾಕಲಾಗಿದ್ದು, ಈ ವಿಚಾರಕ್ಕೆ 2 ಕೋಮಿನ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ. ಈ ಹಿನ್ನೆಲೆ ಅನ್ಯಕೋಮಿನ 20 ಜನರ ವಿರುದ್ಧ ಹಿಂದೂ ಯುವಕರು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

