ವಿಜಯಪುರ : ದುರ್ಗಾದೇವಿ ಜಾತ್ರೆಯಲ್ಲಿ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡೂ ಗುಂಪಿನ ಕಡೆಯ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲೆಯ ಅಂಕಲಗಿ ಗ್ರಾಮದ ದುರ್ಗಾದೇವಿ ಜಾತ್ರೆಯಲ್ಲಿ ವಡ್ಡರ್ ಮತ್ತು ಪೂಜಾರಿ ಗುಂಪುಗಳ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಬಾಲಕಿಗೆ ಗಾಯವಾಗಿತ್ತು. ಈ ಸಂಬಂಧ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ದುರ್ಗಾದೇವಿ ಜಾತ್ರೆಯಲ್ಲಿ ವಡ್ಡರ್ ಮತ್ತು ಪೂಜಾರಿ ಗುಂಪುಗಳ ನಡುವೆ ಗಲಾಟೆ ನಡೆದಿತ್ತು ಈ ವೇಲೆ ಜಾತ್ರೆಯಲ್ಲಿ ರಾಮ ಅಂಕಲಗಿ ಎಂಬಾತ ತನ್ನ ಲೈಸೆನ್ಸ್ ಪಿಸ್ತೂಲಿನಿಂದ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಅದು ಓರ್ವ ಬಾಲಕಿ ಕಾಲಿಗೆ ತಗುಲಿ ಗಂಭೀರ ಗಾಯವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡೂ ಗುಂಪಿನ ಕಡೆಯ 14 ಜನರನ್ನು ಪೊಲೀಸರು ಬಂಧಿಸಿದ್ದಾರೆ.