HomeLatest Newsಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ: ಕಂಗಾಲಾದ ರೈತರು 

ಮೈಸೂರು ಜಿಲ್ಲೆಯಲ್ಲಿ ಮುಂದುವರಿದ ಹುಲಿ ದಾಳಿ: ಕಂಗಾಲಾದ ರೈತರು 

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿ ಪ್ರಕರಣಗಳು ಮುಂದುವರಿದಿದ್ದು, ಗ್ರಾಮಸ್ಥರಲ್ಲಿ ಭಾರೀ ಆತಂಕ ಮೂಡಿಸಿದೆ. ಹುಣಸೂರು ತಾಲ್ಲೂಕಿನ ಗುರುಪುರ ಕೆರೆ ಬಳಿ ಹುಲಿ ದಾಳಿಗೆ ಒಂದು ಎತ್ತು ಬಲಿಯಾಗಿದೆ.

ಗುರುಪುರ ಗ್ರಾಮದ ಹಳೇವಾರಂಚಿಯ ಮುನ್ನಾ ಎಂಬುವರಿಗೆ ಸೇರಿದ ಎತ್ತನ್ನು, ಕೆರೆ ಸಮೀಪ ಜಾನುವಾರುಗಳನ್ನು ಮೇಯಲು ಕಟ್ಟಿ ಹಾಕಿದ್ದ ವೇಳೆ ಹುಲಿ ದಾಳಿ ಮಾಡಿ ಕೊಂದಿದೆ. ಒಂದೇ ತಾಲ್ಲೂಕಿನಲ್ಲಿ ನಿರಂತರವಾಗಿ ಹುಲಿ ದಾಳಿ ನಡೆಯುತ್ತಿರುವುದರಿಂದ ಗ್ರಾಮಸ್ಥರು ತೀವ್ರ ಭಯದಲ್ಲಿದ್ದಾರೆ.

ಇದೇ ಹುಣಸೂರು ತಾಲ್ಲೂಕಿನಲ್ಲಿ ಎರಡು ಕಡೆ ಹುಲಿ ದಾಳಿ ಸಂಭವಿಸಿದ್ದು, ಹಸು ಹಾಗೂ ಎತ್ತು ಬಲಿಯಾಗಿವೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಅರಣ್ಯ ಇಲಾಖೆಯ ವಿರುದ್ಧ ಪ್ರತಿಭಟನೆಗೆ ಇಳಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹುಲಿ ದಾಳಿಯಲ್ಲಿ ಮೃತಪಟ್ಟ ಎತ್ತಿನ ಶವವನ್ನು ಟ್ರ್ಯಾಕ್ಟರ್‌ನಲ್ಲಿ ತಂದು ಗ್ರಾಮಸ್ಥರು ಗುರುಪುರದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಎಚ್.ಡಿ.ಕೋಟೆ–ಹುಣಸೂರು ಮುಖ್ಯರಸ್ತೆಯನ್ನು ತಡೆದು ಕೆಲಕಾಲ ರಸ್ತೆ ತಡೆ ನಡೆಸಿದರು.

ಅರಣ್ಯ ಇಲಾಖೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿದ ಗ್ರಾಮಸ್ಥರು, ತಕ್ಷಣ ಹುಲಿಯನ್ನು ಸೆರೆ ಹಿಡಿಯಬೇಕು. ಗ್ರಾಮಗಳ ಸುತ್ತಲೂ ಪಹರೆ ಹೆಚ್ಚಿಸಬೇಕು ಹಾಗೂ ಜಾನುವಾರು ನಷ್ಟಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಹುಲಿ ದಾಳಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರ ಸುರಕ್ಷತೆ ಬಗ್ಗೆ ಗಂಭೀರ ಆತಂಕ ವ್ಯಕ್ತವಾಗಿದ್ದು, ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಮತ್ತೊಂದು ಚಿರತೆ ಸೆರೆ: ನಂಜನಗೂಡು ತಾಲ್ಲೂಕಿನ ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಸೆರೆಯಾಗಿದ್ದು, ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ಅಳಗಂಚಿ ಗ್ರಾಮದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಸಾಕು ಪ್ರಾಣಿಗಳ ಮೇಲೆ ದಾಳಿ ನಡೆಸಿ ತಿಂದು ಹಾಕುತ್ತಿತ್ತು. ಚಿರತೆ ದಾಳಿಯಿಂದ ಭಯಭೀತರಾಗಿದ್ದ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಚಿರತೆ ಸೆರೆ ಹಿಡಿಯುವಂತೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ಗುರುಮಲ್ಲೇಶ್ವರ ಸ್ವಾಮಿ ಗದ್ದುಗೆ ಬಳಿ ಅರಣ್ಯಾಧಿಕಾರಿಗಳು ಬೋನು ಅಳವಡಿಸಿದ್ದರು. ಸುಮಾರು ಮೂರರಿಂದ ನಾಲ್ಕು ವರ್ಷದ ಗಂಡು ಚಿರತೆಯೊಂದು ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿರಾಳರಾಗಿದ್ದಾರೆ. ಬೋನಿಗೆ ಬಿದ್ದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular