HomeEntertainmentBIG NEWS: 'ಕಾಂತಾರ' ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದು ಖುಷಿಯಾಗಿದೆ; ಜವಾಬ್ದಾರಿ ಇನ್ನೂ ಹೆಚ್ಚಾಗಿದೆ: ನಟ...

BIG NEWS: ‘ಕಾಂತಾರ’ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದು ಖುಷಿಯಾಗಿದೆ; ಜವಾಬ್ದಾರಿ ಇನ್ನೂ ಹೆಚ್ಚಾಗಿದೆ: ನಟ ರಿಷಬ್ ಶೆಟ್ಟಿ ಸಂತಸ

ಬೆಂಗಳೂರು: ನ್ಯಾಷನಲ್ ಅವಾರ್ಡ್ ಗಳಲ್ಲಿ ಕನ್ನಡದ ಸಿನಿಮಾಗಳು ದರ್ಬಾರ್ ಮಾಡಿವೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಹಾಗೂ ಯಶ್ ನಟನೆಯ ಕೆಜಿಎಫ್ ಚಿತ್ರಗಳಿಗೆ ಎರಡೆರಡು ರಾಷ್ಟ್ರ ಪ್ರಶಸ್ತಿ ಲಭ್ಯವಾಗಿದ್ದು, ಕನ್ನಡಕ್ಕೆ ಒಟ್ಟು ಆರು ಪ್ರಶಸ್ತಿ ಬಂದಿರುವುದು ಹೆಮ್ಮೆಯ ಸಂಗತಿ.

70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದ್ದು, ಕನ್ನಡದ ಕಾಂತಾರ, ಕೆಜಿಎಫ್ ಚಿತ್ರಗಳು ತಲಾ ಎರಡು ಪ್ರಶಸ್ತಿ ಹಾಗೂ ಮದ್ಯಂತರ, ಅತ್ಯುತ್ತಮ ಸಂಕಲನ ಸುರೇಶ್ ಅರಸ್ ಅವರಿಗೆ ಪ್ರಶಸ್ತಿ ಪ್ರಕಟವಾಗಿದೆ.

ರಾಷ್ಟ್ರ ಪ್ರಶಸ್ತಿ ಪ್ರಕಟವಾಗುತ್ತಿದ್ದಂತೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಟ ರಿಷಬ್ ಶೆಟ್ಟಿ, ಕಾಂತಾರ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ಸಿಕ್ಕಿರುವುದು ಖುಷಿಯಾಗಿದೆ. ಘೋಷಣೆ ಮಾಡುವಾಗಲೇ ಪ್ರಶಸ್ತಿ ಬಂದಿದೆ ಎಂದು ಗೊತ್ತಾಗಿದೆ. ಈ ಪ್ರಶಸ್ತಿ ಜವಾಬ್ದಾರಿಯನ್ನು ಇನ್ನಷ್ಟು ಹೆಚ್ಚಿಸಿದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂತಾರ ಚಿತ್ರಕ್ಕೆ ಎರಡು ಹಾಗೂ ಕೆಜಿಎಫ್ ಚಿತ್ರಕ್ಕೆ ಎರಡು ಪ್ರಶಸ್ತಿ, ಈ ಮೂಲಕ ಹೊಂಬಾಳೆ ಫಿಲ್ಮ್ಸ್ ಗೆ ನಾಲ್ಕು ರಾಷ್ಟ್ರ ಪ್ರಶಸ್ತಿ ಸಿಕ್ಕಂತಾಗಿದೆ. ಕಾಂತಾರ ಚಿತ್ರಕ್ಕೆ ಸಿಕ್ಕ ಈ ಪ್ರಶಸ್ತಿಯನ್ನು ಇಡೀ ಚಿತ್ರತಂಡಕ್ಕೆ ಅರ್ಪಿಸುತ್ತೇನೆ. ಈ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ. ಕನ್ನಡ ಚಿತ್ರಗಳಿಗೆ ಪ್ರಶಸ್ತಿ ಸಿಕ್ಕಿರುವುದು ಅತ್ಯಂತ ಸಂತಸವಾಗಿದೆ. ವರಮಹಾಲಕ್ಷ್ಮೀ ಹಬ್ಬದ ದಿನದಂದು ಪ್ರಶಸ್ತಿ ಬಂದಿರುವುದು ಖುಷಿಯ ವಿಚಾರ ಎಂದು ಸಂತಸ ಹಂಚಿಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular