HomeLatest News'ರೀ ಎಂಟ್ರಿ' ಬಗ್ಗೆ ಅಭಿಮಾನಿಗಳಿಗೆ ಮತ್ತೊಂದು ಅಪ್ ಡೇಟ್ ಕೊಟ್ಟ ರಿಷಬ್ ಪಂತ್

‘ರೀ ಎಂಟ್ರಿ’ ಬಗ್ಗೆ ಅಭಿಮಾನಿಗಳಿಗೆ ಮತ್ತೊಂದು ಅಪ್ ಡೇಟ್ ಕೊಟ್ಟ ರಿಷಬ್ ಪಂತ್

 ಕಳೆದ ವರ್ಷ ಡಿಸೆಂಬರ್‌ನಿಂದ ಹೊರಗುಳಿದಿರುವ ಭಾರತದ ವಿಕೆಟ್‌ಕೀಪರ್-ಬ್ಯಾಟರ್ ರಿಷಬ್ ಪಂತ್ ಅವರ ಪುನರಾಗಮನಕ್ಕಾಗಿ ಇಡೀ ದೇಶ ಕಾಯುತ್ತಿದೆ. ಅವರು ಕ್ರಿಕೆಟ್ ಗೆ ವಾಪಸ್ ಮರಳುವ ದಿನ ಹತ್ತಿರದಲ್ಲಿವೆ. ಏಕೆಂದರೆ ಅವರು ಇದೀಗ ಚೇತರಿಸಿಕೊಳ್ಳುತ್ತಿದ್ದು ಸ್ವಂತಬಲದಿಂದ ಮೆಟ್ಟಿಲುಗಳನ್ನು ಹತ್ತುತ್ತಿದ್ದಾರೆ.

ಕಳೆದ ಡಿಸೆಂಬರ್ ನಲ್ಲಿ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದಾಗ ಭೀಕರ ಕಾರು ಅಪಘಾತಕ್ಕೊಳಗಾಗಿದ್ದ ಪಂತ್ ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯಲ್ಲಿ ಪುನರ್ವಸತಿ ಪಡೆಯುತ್ತಿದ್ದಾರೆ. ತಾವು ಸುಧಾರಿಸುತ್ತಿರುವ ಬಗ್ಗೆ ಆಗಾಗ್ಗೆ ಅಭಿಮಾನಿಗಳಿಗೆ ಅಪ್ ಡೇಟ್ ಕೊಡುವ ಪಂತ್ ಇದೀಗ ವಿಡಿಯೋವೊಂದನ್ನ ಹಂಚಿಕೊಂಡಿದ್ದು ಅದರಲ್ಲಿ ಅವರು ಸ್ವಯಂಬಲದಿಂದ ಆರಾಮವಾಗಿ ಮೆಟ್ಟಿಲು ಹತ್ತುತ್ತಿದ್ದಾರೆ.

ವಿಡಿಯೋಗೆ ಡೆಲ್ಲಿ ಕ್ಯಾಪಿಟಲ್ಸ್, ಪಂತ್ ಸಹೋದರಿ ಸಾಕ್ಷಿ ಪಂತ್, ಭಾರತ ಮಹಿಳಾ ತಂಡದ ಆಲ್‌ರೌಂಡರ್ ಹರ್ಲೀನ್ ಡಿಯೋಲ್ ಸೇರಿದಂತೆ ಹಲವರು ಪ್ರತಿಕ್ರಿಯಿಸಿದ್ದು ಶೀಘ್ರವೇ ಸಂಪೂರ್ಣ ಗುಣಮುಖರಾಗಿ ವಾಪಸ್ ಮರಳುವಂತೆ ಶುಭ ಕೋರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular